BESCOM: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳಿಗೆ 8 ಜಿಲ್ಲೆಗೆ ವಾಟ್ಸಾಪ್ ಸಂಖ್ಯೆ ನೀಡಿದ ಬೆಸ್ಕಾಂ
BESCOM: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಈ ಕುರಿತ ವಿವರ ಇಲ್ಲಿದೆ.
 
                                -
 Siddalinga Swamy
                            
                                Apr 3, 2025 3:28 PM
                                
                                Siddalinga Swamy
                            
                                Apr 3, 2025 3:28 PM
                            ಬೆಂಗಳೂರು: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ (BESCOM) ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಾಟ್ಸಾಪ್ ಸಹಾಯವಾಣಿ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014,
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ: 8277884017, ರಾಮನಗರ ಜಿಲ್ಲೆ: 8277884018, ತುಮಕೂರು ಜಿಲ್ಲೆ: 8277884019, ಚಿತ್ರದುರ್ಗ ಜಿಲ್ಲೆ: 8277884020 ಮತ್ತು ದಾವಣಗೆರೆ ಜಿಲ್ಲೆ: 8277884021
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜತೆಗೆ ವಿದ್ಯುತ್ ಸಂಬಂಧಿತ ದೂರುಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ. ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 
ಈ ಸುದ್ದಿಯನ್ನೂ ಓದಿ | Wedding Fashion: ವೆಡ್ಡಿಂಗ್ ಬ್ರೈಡಲ್‌ವೇರ್ ಶಾಪಿಂಗ್ ಮಾಡುವವರಿಗೆ 5 ಸಿಂಪಲ್ ಐಡಿಯಾ
