ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

BESCOM: ಆಡುಗೋಡಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.18ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ವಿದ್ಯುತ್‌ ವ್ಯತ್ಯಯ (ಸಾಂದರ್ಭಿಕ ಚಿತ್ರ) -

Profile
Siddalinga Swamy Nov 17, 2025 10:08 PM

ಬೆಂಗಳೂರು, ನ.17: ಆಡುಗೋಡಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.18ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆಎಂಎಫ್‌ ಗೋಡೌನ್, ನಂಜಪ್ಪ ಲೇಔಟ್‌, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್‌, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡೇರಿ, ಫೋರಾಮ್, ರಂಗದಾಸಪ್ಪ ಲೇಔಟ್‌, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ಟ್ರೇಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್‌, ಎನ್‌ಡಿಆರ್‌ಐ, ಪೊಲೀಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Bescom Helpline: ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ನ.19ರಂದು ಎಲ್ಲಿಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್‌ 220/66/11 ಕೆ.ವಿ. ಎನ್.ಆರ್.ಎಸ್, 66/11 ಕೆ.ವಿ. ಪಲಾಡಿಯಂ ಮತ್ತು 66/11 ಕೆ.ವಿ. ಟೆಲಿಕಾಂ ಲೇಔಟ್‌ನ ವಿದ್ಯುತ್‌ ವಿತರಣಾ ಕೇಂದ್ರಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ

220/66/11 ಕೆ.ವಿ. ಎನ್.ಆರ್.ಎಸ್: ರಾಜಾಜಿನಗರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್ & 6ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಗುಬ್ಬಣ್ಣ ಇಂಡಸ್ಟ್ರಿಯಲ್ ಏರಿಯಾ, ಡಾ. ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥ ನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ 1ನೇ ಕ್ರಾಸ್, 2ನೇ ಕ್ರಾಸ್, 3ನೇ ಕ್ರಾಸ್, 4ನೇ ಕ್ರಾಸ್, 5ನೇ ಕ್ರಾಸ್, ಮಹಾಗಣಪತಿ ನಗರ, ಕೆ.ಎಚ್.ಬಿ. ಕಾಲೋನಿ 2ನೇ ಹಂತ, ದೇವಯ್ಯ ಪಾರ್ಕ್, ನಾಗಪ್ಪ ಬ್ಲಾಕ್, ಲಿಂಕ್ ರೋಡ್, ಶನಿಮಹಾತ್ಮ ಟೆಂಪಲ್, ಪ್ರಕಾಶನಗರ, ಗಾಯತ್ರಿನಗರ, ಸುಬ್ರಮಣ್ಯನಗರ, ಎಲ್.ಎನ್.ಪುರ, ರಾಜ್‌ ಕುಮಾರ್ ರೋಡ್, ದಯಾನಂದನಗರ, ಸಾಯಿಮಂದಿರ, ಹರಿಶ್ಚಂದ್ರ ಘಾಟ್, ಮಾರುತಿ ಎಕ್ಸ್‌ಟೆನ್ಸನ್, ರಾಜಾಜಿನಗರ, ಬ್ರಿಗೇಡ್ ಗೇಟ್ ವೇ ಅಪಾರ್ಟ್‌ಮೆಂಟ್ಸ್, ಪ್ಯಾಲೇಸ್ ಗುಟ್ಟಹಳ್ಳಿ, ಮುನೇಶ್ವರ ಬ್ಲಾಕ್, ಮಲ್ಲೇಶ್ವರಂ ಸ್ವಿಮ್ಮಿಂಗ್ ಪೂಲ್, ಪೈಪ್‌ಲೈನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

66/11 ಕೆ.ವಿ ಪಲಾಡಿಯಂ: ಆರ್.ಬ್ಲಾಕ್, ನಿರ್ಮಾಣ್ ಭವನ್, ಕೆ.ಆರ್.ಡಿ.ಸಿ.ಎಲ್, ಜೆಟ್‌ ಲಾಗ್, ನಾರಾಯಣ ನೇತ್ರಾಲಯ, ಇಸ್ಕಾನ್ ಟೆಂಪಲ್, ಪಲಾಡಿಯಂ ವಸತಿ ಸಮುಚ್ಚಯ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Winter Hairstyle 2025: ವಿಂಟರ್ ಫ್ಯಾಷನ್‌ಗೆ ಲಗ್ಗೆ ಇಟ್ಟ ಹನ್ ಹೇರ್‌ಸ್ಟೈಲ್

66/11 ಕೆ.ವಿ ಟೆಲಿಕಾಂ ಲೇಔಟ್: ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ. ಲೇಔಟ್, ವಿಜಯನಗರ ವಾಟರ್ ಟ್ಯಾಂಕ್, ಹೊಸಹಳ್ಳಿ ಮೈನ್ ರೋಡ್, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿಪೇಟೆ, ಜಗಜೀವನ ರಾಂನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಭುವನೇಶ್ವರಿ ನಗರ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್ ಶೆಡ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.