ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

SP Lavanya BN: ಬೆಸ್ಕಾಂ ಜಾಗೃತ ದಳದ ಎಸ್‌ಪಿ ಲಾವಣ್ಯ ಅನಾರೋಗ್ಯದಿಂದ ನಿಧನ

ಮೃತ ಎಸ್ಪಿ ಲಾವಣ್ಯ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಚಿಂತಾಮಣೀ ತಾಲೂಕಿನ ದೊಡ್ಡಗಂಜೂರಿಗೆ ರವಾನಿಸುವ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಯೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಯುವ ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಸ್ಕಾಂ ಜಾಗೃತ ದಳದ ಎಸ್‌ಪಿ ಲಾವಣ್ಯ ಅನಾರೋಗ್ಯದಿಂದ ನಿಧನ

ಎಸ್ಪಿ ಲಾವಣ್ಯ ಬಿ.ಎನ್. -

Prabhakara R
Prabhakara R May 2, 2026 10:47 PM

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಬಿ.ಎನ್‌ (Lavanya BN) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಬೆಸ್ಕಾಂ ವಿಜಿಲೆನ್ಸ್‌ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.. ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟೆಲಿಜೆನ್ಸ್ ಮತ್ತು ಡಿಸಿಆರ್‌ಇ ಎಸ್ಪಿ ಆಗಿ ಕೆಲಸ ಮಾಡಿದ್ದಾರೆ.

ಇತ್ತೀಚೆಗಷ್ಟೇ ವಿದ್ಯಾರಣ್ಯಪುರದಲ್ಲಿರುವ ನಿವಾಸಕ್ಕೆ ಎರಡು ತಿಂಗಳ ಹಿಂದೆ ಡಿಜಿ-ಐಜಿಪಿ ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಚೇತರಿಸಿಕೊಳ್ಳುವಂತೆ ಹಾರೈಸಿ ಕುಟುಂಬದವರಿಗೂ ಸಹ ಧೈರ್ಯ ತುಂಬಿ ಬಂದಿದ್ದರು.

Chief Information Commissioner: ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತೆಯಾಗಿ ಜಿ. ಸತ್ಯವತಿ ನೇಮಕ