ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಡಾ. ಮುರಳಿ ಮೋಹನ ಚೂಂತಾರುಗೆ ಶ್ರೇಷ್ಟ ವೈದ್ಯ ಸಾಹಿತಿ ಪ್ರಶಸ್ತಿ

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 20 ಮತ್ತು 21, 2026ರಂದು ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ – 2026 ಜರುಗಲಿದೆ.

ಡಾ. ಮುರಳಿ ಮೋಹನ ಚೂಂತಾರುಗೆ ಶ್ರೇಷ್ಟ ವೈದ್ಯ ಸಾಹಿತಿ ಪ್ರಶಸ್ತಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 19, 2026 7:04 PM

ಬೆಂಗಳೂರು: ನಗರದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ (Dr. Murali Mohana Choontharu) ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 20 ಮತ್ತು 21, 2026ರಂದು ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ – 2026 ಜರುಗಲಿದೆ. ಇದೇ ಸಂದರ್ಭದಲ್ಲಿ ಕನ್ನಡ ವೈದ್ಯಕೀಯ ಸಾಹಿತ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ದಂತ ವೈದ್ಯಕೀಯ ವಿಭಾಗದಿಂದ ಡಾ. ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ.

ನವೆಂಬರ್ 21ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಸಾಹಿತಿಗಳನ್ನು ಸನ್ಮಾನಿಸಲಾಗುತ್ತದೆ. ವೈದ್ಯಕೀಯ ವಿಜ್ಞಾನ ಕ್ಷೇತ್ರದ ಪ್ರಪ್ರಥಮ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ ಇದಾಗಿದ್ದು, ರಾಜ್ಯದ ವಿವಿಧ ವೈದ್ಯಕೀಯ ವಿಭಾಗಗಳ ವೈದ್ಯ ಸಾಹಿತಿಗಳು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.