ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ವಿಮಾನ ನಿಲ್ದಾಣದ ಸಂಪೂರ್ಣ ಕಾರ್ಯಾಚರಣೆ ನಡೆಸಿಕೊಟ್ಟ ಬಿಐಎಎಲ್‌ಆರ್ ಮಹಿಳಾ ತಂಡ
ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ದಿನದ ಮಟ್ಟಿಗೆ ಇಡೀ ಟರ್ಮಿನಲ್ 1 ಹಾಗೂ ಟರ್ಮಿನಲ್ 2 ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಮಹಿಳಾ ತಂಡವೇ ನಿರ್ವಹಿಸುವ ಮೂಲಕ, ಮಹಿಳಾ ಶಕ್ತಿಯನ್ನು ಪ್ರದರ್ಶಿಸ ಲಾಯಿತು.
-
ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ದಿನದ ಮಟ್ಟಿಗೆ ಇಡೀ ಟರ್ಮಿನಲ್ 1 ಹಾಗೂ ಟರ್ಮಿನಲ್ 2 ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಮಹಿಳಾ ತಂಡವೇ ನಿರ್ವಹಿಸುವ ಮೂಲಕ, ಮಹಿಳಾ ಶಕ್ತಿಯನ್ನು ಪ್ರದರ್ಶಿಸಲಾಯಿತು.
ಇದನ್ನೂ ಓದಿ: Women's Day: ಮಹಿಳಾ ದಿನದ ಹಿನ್ನೆಲೆ: ಲಯನ್ಸ್ ಡಿಸ್ಟ್ರಿಕ್ಟ್ 317ಎಫ್ ನಿಂದ ಮಹಿಳೆಯರಿಗೆ 15 ಇ-ಆಟೋ ವಿತರಣೆ
ವಿಮಾನ ನಿಲ್ದಾಣದ ಕಾರ್ಯಾಚರಣೆಯ ಭಾಗವಾಗಿ ಭದ್ರತೆ, ಲಗೇಜ್ ತಪಾಸಣೆ, ತುರ್ತು ಸೇವೆಗಳು, ಅತಿಥಿಗಳನ್ನು ಬರಮಾಡಿಕೊಳ್ಳುವುದು, ವಲಸೆ ಸಂಬಂಧಿತ ಮಾಹಿತಿ, ಕಸ್ಟಮ್ಸ್ ಹಾಗೂ ವಿಮಾನ ಯಾನ ಪಾಲುದಾರರ ತಂಡಗಳಾದ್ಯಂತ ಎಲ್ಲೆಡೆ ಮಹಿಳೆಯರೇ ಕಾರ್ಯ ನಿರ್ವಹಿಸಿದ್ದಾರೆ.
ಇಡೀ ದಿನ ಮಹಿಳಾ ತಂಡವೇ ಎಲ್ಲಾ ಜವಾಬ್ದಾರಿ ನಿಭಾಯಿಸಿ, ಎಲ್ಲಿಯೂ ಲೋಪವಾಗದಂತೆ ಸುಗಮ ಕಾರ್ಯಾಚರಣೆಗೆ ಅನುವು ಮಾಡಿಕೊಡಲಾಗಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತೆಗೆದುಕೊಂಡಿದ್ದ ಈ ನಿರ್ಧಾರಕ್ಕೆ ಪ್ರಯಾಣಿಕರು ಸಹ ಪ್ರಶಂಸೆ ವ್ಯಕ್ತಪಡಿಸಿ ದರು.