ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MUDA Case: ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌; ಇಡಿಗೆ ಸುಪ್ರೀಂ ಕೋರ್ಟ್‌ನಿಂದ ಕ್ಲಾಸ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ( Mysore Urban Development Authority- MUDA) ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ( Mysore Urban Development Authority- MUDA) ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಜಾರಿ ನಿರ್ದೇಶನಾಲಯಕ್ಕೆ ಭಾರೀ ಹಿನ್ನಡೆಯಾಗಿದೆ.

ಹೈಕೋರ್ಟ್ ಆದೇಶದ ವಿರುದ್ಧ ಇಡಿ ಸಲ್ಲಿಸಿದ ಮೇಲ್ಮನವಿಯನ್ನು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿತ್ತು. ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ. ಇ.ಡಿಯನ್ನು ರಾಜಕೀಯ ಹೋರಾಟಗಳಿಗೆ ಏಕೆ ಬಳಸಲಾಗುತ್ತಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಮತದಾರರಲ್ಲಿ ರಾಜಕೀಯ ಹೋರಾಟಗಳು ನಡೆಯಲಿ. ನಿಮ್ಮನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ ಎಂದು ನ್ಯಾಯಾಧೀಶರು ಇಡಿಗೆ ಕೇಳಿದ್ದಾರೆ.

ನಮ್ಮ ಬಾಯಿ ತೆರೆಯಲು ಪ್ರಯತ್ನಿಸಬೇಡಿ. ಮಹಾರಾಷ್ಟ್ರದಲ್ಲಿ ಏನಾಗಿದೆ ಎಂಬುದನ್ನು ನಾವು ನೋಡಿದ್ದೇವೆ. ಇನ್ನೂ ಯಾವ ಪ್ರಕರಣದಲ್ಲಿಯೂ ರಾಜಕೀಯವನ್ನು ತರಬಾರದು ಎಂದು ಕೋರ್ಟ್‌ ತಾಕೀತು ಮಾಡಿದೆ.

ಈ ಸುದ್ದಿಯನ್ನೂ ಓದಿ: MUDA Scam: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿಗೆ ನೋಟಿಸ್​ ಜಾರಿ ಮಾಡಲು ಹೈಕೋರ್ಟ್​ ಆದೇಶ

ಏನಿದು ಮುಡಾ ಪ್ರಕರಣ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು.