ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಬಿ.ಆರ್. ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ತನಿಖೆಗೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ -
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಇದರಿಂದ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿದೆ. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ಗೂ ಎಕ್ಸ್ ಪೋಸ್ಟ್ಗೂ ಸಂಬಂಧವಿಲ್ಲವೆಂದು ಡಿ.ಕೆ. ಶಿವಕುಮಾರ್ ಪರ ವಕೀಲ ಎಚ್.ವಿ.ಪ್ರವೀಣ್ ಗೌಡ ವಾದಿಸಿದ್ದಾರೆ. ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದಿದ್ದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದನ್ನು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ತಿರುಚಿ ಪೋಸ್ಟರ್ಗಳನ್ನು ಹಾಕಿದ್ದರು.
Rashmika Vijay Reception: ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ!
ಕಾಂಗ್ರೆಸ್ ತಿರುಚಿದ ಪೋಸ್ಟರ್ಗಳು ಫೋರ್ಜರಿ ಮತ್ತು ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪ ಕೇಳಿಬಂದಿದ್ದರಿಂದ ದೂರು ದಾಖಲಾಗಿತ್ತು. ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ್ಸ್ ಪೊಲೀಸರಿಂದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಆರ್ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ತನಿಖೆಗೆ ಆದೇಶಿಸಿತ್ತು.