N Ravikumar: ಸಿಎಸ್ಗೆ ಅವಹೇಳನ: ಎಂಎಲ್ಸಿ ಎನ್ ರವಿಕುಮಾರ್ಗೆ ಹೈಕೋರ್ಟ್ ರಿಲೀಫ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ
N Ravikumar: ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಮಾತಿನ ಪ್ರಕರಣ ಸಂಬಂಧ ಹೈಕೋರ್ಟ್ಗೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.

ಎನ್ ರವಿಕುಮಾರ್

ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Chief Secretary Shalini Rajneesh) ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ (BJP MLC N Ravikumar) ಅವರಿಗೆ ಕರ್ನಾಟಕ ಹೈಕೋರ್ಟ್ (Karnataka high court) ಬಿಗ್ ರಿಲೀಫ್ ನೀಡಿದೆ. ಜುಲೈ 8ರವರೆಗೆ ಅವರ ಮೇಲೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ.
ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಮಾತಿನ ಪ್ರಕರಣ ಸಂಬಂಧ ಹೈಕೋರ್ಟ್ಗೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಸಿಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ಗೆ ಸೂಚಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿ ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(3), 75(3), 79 ಅಡಿ ಎಂಎಲ್ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ರವಿಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಸಭಾಪತಿಗಳಿಗೂ ದೂರು ನೀಡಿದೆ. ರವಿಕುಮಾರ್ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳ ವಿರುದ್ಧವೂ ಇದೇ ರೀತಿ ಮಾತನಾಡಿದ್ದರು. ಅವರನ್ನು ಎಂಎಲ್ಸಿ ಸ್ಥಾನದಿಂದ ರವಿಕುಮಾರ್ ಅವರನ್ನು ವಜಾಗೊಳಿಸಿ ಎಂದು ಮನವಿ ಮಾಡಿದೆ.
ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ಗೆ ಹೈಕೋರ್ಟ್ ತಡೆ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು (Advertsement) ಪ್ರಕಟಿಸಿದ್ದ ಆರೋಪದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಕೆಪಿಸಿಸಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಇಂದು ತಡೆ ನೀಡಿತು.
ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. ರಾಹುಲ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು.
ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಮತ್ತು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಈ ಆದೇಶ ನೀಡಿದೆ. ಪ್ರತಿವಾದಿಯಾಗಿರುವ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: MLC N Ravikumar: ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ಎಫ್ಐಆರ್