ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್‌ – ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ (Mohammed Nalapad)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ಬಿಟ್ ಕಾಯಿನ್ ಕೇಸ್‌; ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್‌

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 31, 2026 11:39 AM

ಬೆಂಗಳೂರು: ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ (Mohammed Nalapad)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ಶ್ರೀಕಿ, ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಪರಿಶೀಲನೆ ನಡೆಸಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ಶ್ರೀಕಿ, ಸುನೇಶ್ ಹೆಗ್ಡೆ, ರಾಬಿನ್ ಖಂಡೇವಾಲ ಅವರನ್ನ ಬಂಧಿಸಿದೆ.

ಬಿಟ್ ಕಾಯಿನ್ ಕೇಸ್ ಸಂಬಂದ ಕೈ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಎರಡನೇ ಬಾರಿ ನೋಟಿಸ್​ ನೀಡಿದೆ. ರಾಜಕೀಯ ಕಾರ್ಯಕ್ರಮ ಹಿನ್ನೆಲೆ ಮೊದಲ ನೋಟಿಸ್​​ಗೆ ನಲಪಾಡ್​​ ಹಾಜರಾಗಿರಲಿಲ್ಲ. ಕಾರಣ ತಿಳಿಸಿ ಇಡಿಗೆ ಮನವಿ ಮಾಡಿದ್ದರು. ಇದೀಗ ಎರಡನೇ ಬಾರಿ ಇಡಿ ನೋಟಿಸ್​ ಜಾರಿ ಮಾಡಿದ್ದುಮ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬೆಂಗಳೂರಿನ ಅಶೋಕನಗರದಲ್ಲಿರುವ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಸತತ 21 ಗಂಟೆಗಳ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಹಾರ್ಡ್‌ಡಿಸ್ಕ್‌, ವಿದೇಶಿ ವ್ಯವಹಾರದ ಬ್ಯಾಂಕ್ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.

ಕೆಲ ವರ್ಷಗಳ ಹಿಂದೆ ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದರು.