ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka MLC Election: ವಿಧಾನ ಪರಿಷತ್‌ ಚುನಾವಣೆ; ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಯಾವ ಕ್ಷೇತ್ರ ಯಾರು ಅಭ್ಯರ್ಥಿ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ವಿಧಾನ ಪರಿಷತ್‌ ಚುನಾವಣೆ; 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಎಂಎಲ್‌ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳಾದ ಎಸ್.ವಿ. ಸಂಕನೂರ್, ಸುಶೀಲ್ ನಮೋಶಿ, ಕೆ.ಎಂ. ಸುರೇಶ್. -

Prabhakara R
Prabhakara R Mar 10, 2026 7:10 PM

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ (Karnataka MLC Election) ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಒಟ್ಟು ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಉಳಿದ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಡಲಾಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರಿಸಿದೆ.



ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸದಸ್ಯ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರದಲ್ಲಿ ಹಿರಿಯ ನಾಯಕ ಎಸ್.ವಿ. ಸಂಕನೂರ್, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದೆ.

LPG crisis: ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿ, ಮುಂಬರುವ ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಘೋಷಿಸಿದೆ. ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಯಶಸ್ಸಿಗೆ ಶುಭಹಾರೈಕೆಗಳು. ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ನಮ್ಮ ಸೇವೆಯನ್ನು ಸಮರ್ಥವಾಗಿ ಮುಂದುವರಿಸೋಣ ಎಂದು ತಿಳಿಸಿದ್ದಾರೆ.