ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP core committee meeting: ಬೆಂಗಳೂರಿನಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ; ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಮಾಸ್ಟರ್‌ ಪ್ಲಾನ್‌

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟ, ಬೆಂಗಳೂರಿನ ರಸ್ತೆಗುಂಡಿ, ಸುರಂಗ ಮಾರ್ಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ (GBA) ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಬೆಂಗಳೂರು; ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ (BJP core committee meeting) ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟ, ಬೆಂಗಳೂರಿನ ರಸ್ತೆಗುಂಡಿ, ಸುರಂಗ ಮಾರ್ಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ (GBA) ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಮ್ಮುಖದಲ್ಲಿ ಕೋರ್ ಕಮಿಟಿ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಶಾಸಕ ಆರ್. ಅಶೋಕ್ ಮುಂತಾದವರು ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಲು ರಾಜಕೀಯ ಹೋರಾಟ ನಡೆಸುವ ಬಗ್ಗೆ ತಂತ್ರ ರೂಪಿಸುವ ಸಾಧ್ಯತೆಯಿದೆ. ಜೊತೆಗೆ, ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ತೋರಿಸಿರುವ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ಹೋರಾಟದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಇದೆ.

ನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮುಚ್ಚುವ ಕುರಿತು ಕಳೆದ ವಾರ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಈ ಪ್ರತಿಭಟನೆಯಲ್ಲಿ, ಇಡೀ ಬೆಂಗಳೂರನ್ನು ಗುಂಡಿ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂಬ ಘೋಷಣೆ ಕೂಗಿದರು. ಅಲ್ಲದೇ ಈ ವೇಳೆ ಅವರು ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು, ಬ್ರಾಂಡ್ ಬೆಂಗಳೂರು ಎಂದು ಹೇಳಿ ಬ್ಯಾಡ್ ಬೆಂಗಳೂರು ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ: DK Shivakumar: ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರ್‌ಎಸ್‌ಎಸ್ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ರಾಜ್ಯ ಸರ್ಕಾರ ರಸ್ತೆ ಗುಂಡಿಗಳ ವಿಚಾರವಾಗಿ ಪದೇ ಪದೇ ಮಾತನಾಡುತ್ತಿದೆ ಅಷ್ಟೆ. ಅಲ್ಲದೇ ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳನ್ನು ಕಳೆದ ಎರರೂವರೆ ವರ್ಷದಿಂದ ಎಣಿಸುತ್ತಿದೆ ಅಷ್ಟೆ. ಆದರೆ ಸರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿಲ್ಲ. ರಾಜ್ಯವನ್ನು ಗುಂಡಿಮುಕ್ತವನ್ನಾಗಿ ಮಾಡಲು ಸರ್ಕಾರದ ಬಳಿ ಈವರೆಗೂ ಸಾಧ್ಯವಾಗಲಿಲ್ಲ. ಇದು ಅಭಿವೃದ್ಧಿ ಶೂನ್ಯ ಸರ್ಕಾರವಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.