ಬೆಂಗಳೂರು, ಫೆ. 26: ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಗುರುವಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026ರ ರಾಜ್ಯ ಮಟ್ಟದ ಯೋಜನಾ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಯೋಜನಾ ಸಭೆಗೆ ಚಾಲನೆ ನೀಡಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‍ದಾಸ್ ಅಗರವಾಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪ್ರಶಿಕ್ಷಣ ಮಹಾ ಅಭಿಯಾನದ ರಾಷ್ಟ್ರೀಯ ತಂಡದ ಸದಸ್ಯ ಮತ್ತು ರಾಜ್ಯಸಭಾ ಸಂಸದ ವಿ. ಮುರಳೀಧರನ್, ಪ್ರಶಿಕ್ಷಣ ಮಹಾ ಅಭಿಯಾನದ ದಕ್ಷಿಣ ವಲಯದ ಸಂಚಾಲಕ ಮತ್ತು ತೆಲಂಗಾಣ ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಕಾಸಂ ವೆಂಕಟೇಶ್ವರಲು, ವಿಧಾನಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್ಸಿನವರು ಎಷ್ಟು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತ: ಛಲವಾದಿ ನಾರಾಯಣಸ್ವಾಮಿ