ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು

ಬಿಕ್ಲು ಶಿವ ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಬೈರತಿ ಬಸವರಾಜ್‌ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀಜು ಸಿಕ್ಕಿದೆ.

ಶಾಸಕ ಬೈರತಿ ಬಸವರಾಜು

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva murder case) ಶಾಸಕ ಬೈರತಿ ಬಸವರಾಜ್‌ಗೆ (MLA Bairathi Basavaraj) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಶಾಸಕನನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ಮಂಜೂರಾಗಿರುವ ಹಿನ್ನೆಲೆ ಬಿಜೆಪಿ ಶಾಸಕನಿಗೆ ರಿಲೀಫ್‌ ಸಿಕ್ಕಿದೆ.

ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಅಹಮದಾಬಾದ್‌ಗೆ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 12ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 7 ದಿನಗಳ ಕಾಲ ಶಾಸಕನನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಅದಾದ ನಂತರ 42ನೇ ಎಸಿಜೆಎಂ ನ್ಯಾಯಾಲಯವು ಫೆಬ್ರವರಿ 26ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಇದರಿಂದ ಬಿಜೆಪಿ ಶಾಸಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಇದೀಗ ಅವರಿಗೆ ಜಾಮೀನು ದೊರೆತಿದೆ.

ಪ್ರೇಯಸಿ, ತಂದೆ, ತಾಯಿ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಿಯಕರ!

ಏನಿದು ಪ್ರಕರಣ?

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜು ವಿರುದ್ಧ ಆರೋಪ ಕೇಳಿಬಂದಿತ್ತು. ಹಲಸೂರು ಕೆರೆ ಸಮೀಪ 2025ರ ಜುಲೈ 15ರಂದು ರೌಡಿ ಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ನ ಕೊಲೆ ಆಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎನ್ನಲಾಗಿತ್ತು. ಕೊಲೆ ಆರೋಪದ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಕೊಲೆಯಾದ ಶಿವಪ್ರಕಾಶ್‌ನ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬೈರತಿ 5ನೇ ಆರೋಪಿಯಾಗಿದ್ದಾರೆ.