ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Byrathi Basavaraj: ಬಿಕ್ಲು ಶಿವ ಕೊಲೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಿಡುಗಡೆ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ಶಾಸಕ ಬೈರತಿ ಬಸವರಾಜ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಶಾಸಕ ಬೈರತಿ ಬಸವರಾಜು.

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ (Byrathi basavaraj) ಅವರು ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ. ಪ್ರಕರಣದಲ್ಲಿ ನೆನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಿಡುಗಡೆಯಾಗಿದ್ದಾರೆ.

ನ್ಯಾಯಾಲಯದಿಂದ ಆದೇಶ ಪ್ರತಿ ಅಧಿಕಾರಿಗಳು ಪರಿಶೀಲಿಸಿದ ನಂತರ ಜೈಲಿನಿಂದ ಬೈರತಿ ಬಸವರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ. ಶಾಸಕನನ್ನು ಸ್ವಾಗತಿಸಲು ಜೈಲಿನ ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಮತ್ತು ಕಾರ್ಯಕರ್ತರು ಜಮಾಯಿಸಿದ್ದರು.

ಶಾಸಕ ಜೈಲಿನಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು. ಬಿಡುಗಡೆ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಶಾಸಕ ಕಾರಿನಲ್ಲಿ ಸ್ಥಳದಿಂದ ನಿರ್ಗಮಿಸಿದರು.

ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಅಹಮದಾಬಾದ್‌ಗೆ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 12ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 7 ದಿನಗಳ ಕಾಲ ಶಾಸಕನನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಅದಾದ ನಂತರ 42ನೇ ಎಸಿಜೆಎಂ ನ್ಯಾಯಾಲಯವು ಫೆಬ್ರವರಿ 26ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಇದರಿಂದ ಬಿಜೆಪಿ ಶಾಸಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಗುರುವಾರ ಅವರಿಗೆ ಅವರಿಗೆ ಜಾಮೀನು ಮಂಜೂರಾಗಿದ್ದರಿಂದ ಶುಕ್ರವಾರ ರಿಲೀಸ್‌ ಆಗಿದ್ದಾರೆ.