ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Blackmail: 42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಗಾಳ, ಬ್ಲಾಕ್‌ಮೇಲ್‌, ಯುವಕ ಆತ್ಮಹತ್ಯೆ

ವಿವಾಹಿತ ಮಹಿಳೆಯ ಜೊತೆ ಸಂಬಂಧ ಹಾಗೂ ಆಕೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಮಹಿಳೆಗೆ ದಿಲೀಪ್ ಕರೆ ಮಾಡಿದ್ದಾನೆ. ಮಹಿಳೆಗೆ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.

42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಬ್ಲಾ‌‌ಕ್‌ಮೇಲ್‌, ಯುವಕ ಆತ್ಮಹತ್ಯೆ

ಮೃತ ದಿಲೀಪ್ -

ಹರೀಶ್‌ ಕೇರ
ಹರೀಶ್‌ ಕೇರ Apr 13, 2026 8:19 AM

ನೆಲಮಂಗಲ, ಏ.13: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ (BlackMali) ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ (Gym trainer) ನೇಣು ಬಿಗಿದುಕೊಂಡು ಆತ್ಮಹತ್ಯೆ (self harming) ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ (Nelamangala) ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ (Fitness Trainer) ಆಗಿ ಕೆಲಸ ಮಾಡಿಕೊಂಡಿದ್ದರು.

ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು ಎಂಬ ಆರೋಪಗಳು ಕೇಳಿ ಬಂದಿವೆ. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಮಹಿಳೆಗೆ ದಿಲೀಪ್ ಕರೆ ಮಾಡಿದ್ದಾನೆ. ಮಹಿಳೆಗೆ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ದಿಲೀಪ್‌ ಜೊತೆಗೆ ಸಂಬಂಧದಲ್ಲಿದ್ದಳು ಎನ್ನಲಾದ ವಿವಾಹಿತ ಮಹಿಳೆ ಇನ್‌ಸ್ಟಾಗ್ರಾಮ್‌ ಮೂಲಕ ದಿಲೀಪ್‌ ಸಹೋದರನಿಗೆ ಮೆಸೇಜ್‌ ಮಾಡಿದ್ದಾಳೆ. ನಿನ್ನ ಸಹೋದರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಕೆ ತಿಳಿಸಿದ್ದಾಳೆ. ದಿಲೀಪ್‌ ಸಹೋದರ ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Actor Harish Death: ಕೊಡಗಿನಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಚಿತ್ರನಟ ಹರೀಶ್‌ ಸಾವು

ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.