ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ. ದಂಡ

ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500 ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನ (Bengaluru) ನಮ್ಮ ಮೆಟ್ರೋದಲ್ಲಿ (Namma Metro) ಊಟ ಮಾಡಿದ ಮಹಿಳೆಗೆ 500 ರೂ. ದಂಡ ವಿಧಿಸಿ ಬಿಎಂಆರ್‌ಸಿಎಲ್ (BMRCL) ಆದೇಶ ಹೊರಡಿಸಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಹಿಳಾ ಪ್ರಯಾಣಿಕರಿಗೆ ದಂಡ (Fine) ವಿಧಿಸಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಈ ನಿಯಮ ಮೀರಿದ್ದಕ್ಕಾಗಿ ದಂಡ ವಿಧಿಸಲಾಗಿದೆ.

ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500 ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು. ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದರು.

ಇಂದು ಬೆಳಿಗ್ಗೆ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದಾವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದಾಗ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ. ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕಸ ಹಾಕುವುದನ್ನು ತಡೆಗಟ್ಟುವುದು, ನೈರ್ಮಲ್ಯವನ್ನು ಕಾಪಾಡುವುದು ಮತ್ತು ಪ್ರಯಾಣಿಸುವ ಪ್ರತಿಯೊಬ್ಬರಿಗೂ ಆನಂದದಾಯಕ ವಾತಾವರಣವನ್ನು ಕಾಪಾಡಿಕೊಳ್ಳಲು ಈ ನಿಯಮ ಸಹಾಯ ಮಾಡುತ್ತದೆ. ಎಲ್ಲಾ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸಲು ಮತ್ತು ಮೆಟ್ರೋ ವ್ಯವಸ್ಥೆಯ ಸ್ವಚ್ಛತೆಯನ್ನು ಎತ್ತಿಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡಲು ಪ್ರೋತ್ಸಾಹಿಸುತ್ತದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.



ಬೆಂಗಳೂರು ಮೆಟ್ರೋ ಸಾರ್ವಜನಿಕ ಸ್ಥಳವಾಗಿದ್ದು, ಎಲ್ಲಾ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಸುರಕ್ಷಿತ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಲು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಪ್ರಯಾಣಿಕರು ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಮೆಟ್ರೋ ಪರಿಸರವನ್ನು ಕಾಪಾಡಿಕೊಳ್ಳಲು ಸಕ್ರಿಯವಾಗಿ ಕೊಡುಗೆ ನೀಡಬೇಕು. ಈ ಕಠಿಣ ಕ್ರಮವು ಎಲ್ಲಾ ಪ್ರಯಾಣಿಕರಿಗೆ ಸ್ವಚ್ಛ ಮತ್ತು ಆರಾಮದಾಯಕ ಪುಯಾಣದ ಅನುಭವವನ್ನು ಖಾತ್ರಿಪಡಿಸಿಕೊಳ್ಳುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: Viral News: ಉದ್ಯೋಗಾರ್ಥಿಗಳಲ್ಲಿ ಕನ್ನಡ ಬಯಸದ ಬೆಂಗಳೂರು ಕಂಪನಿ, ನೆಟ್ಟಿಗರ ಸಿಟ್ಟು

ಹರೀಶ್‌ ಕೇರ

View all posts by this author