ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ತೀವ್ರ ಶೋಧ

ರಾಜ್ಯದ ಹಲವು ಕೋರ್ಟ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್‌ ಬೆದರಿಕೆ ಬಂದ ಬಳಿಕ ಇದೀಗ ಇಸ್ರೋ (ISRO) ಪ್ರಧಾನ ಕಚೇರಿಗೆ ಗುರುವಾರ ಬಾಂಬ್ ಬೆದರಿಕೆಯ ಇಮೇಲ್‌ ಕಳುಹಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯಾಚರಣೆ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವು ಕೋರ್ಟ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್‌ ಬೆದರಿಕೆ (Bomb Threat) ಬಂದ ಬಳಿಕ ಇದೀಗ ಇಸ್ರೋ (ISRO) ಪ್ರಧಾನ ಕಚೇರಿಗೆ ಗುರುವಾರ ಬಾಂಬ್ ಬೆದರಿಕೆಯ ಇಮೇಲ್‌ ಕಳುಹಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯಾಚರಣೆ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ ಕೂಡಲೇ ಪೊಲೀಸ್ ಸಿಬ್ಬಂದಿ, ಶ್ವಾನ ದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಟ್ಟಡದ ಸಂಪೂರ್ಣ ಶೋಧ ನಡೆಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಮತ್ತು ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋರ್ಟ್‌ಗೆ ಬಾಂಬ್‌ ಬೆದರಿಕೆ

ಚಿಕ್ಕಮಗಳೂರಿನ ಹೃದಯಭಾಗದಲ್ಲಿರುವ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಖಾತೆಗೆ ಭೀತಿ ಹುಟ್ಟಿಸುವ ಸಂದೇಶವೊಂದು ಬಂದಿದೆ. "ಮಧ್ಯಾಹ್ನ 1:30 ರಿಂದ 3:30 ರ ಒಳಗಾಗಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಬ್ಲಾಸ್ಟ್ ಮಾಡಲಾಗುವುದು" ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಲಯದ ದೈನಂದಿನ ಕಲಾಪಗಳು ನಡೆಯುತ್ತಿದ್ದ ವೇಳೆಯಲ್ಲೇ ಈ ಮಾಹಿತಿ ಲಭ್ಯವಾಗಿದ್ದರಿಂದ ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ನೆರವಿನೊಂದಿಗೆ ಕೋರ್ಟ್ ಆವರಣದಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ.

Tumkur News: ಪ್ರೇಯಸಿಯ ಜತೆ ಗಲಾಟೆ; ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ಇನ್ನು ಮೈಸೂರಿನ ಚಾಮರಾಜಪುರಂನಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಬಂದಿದೆ. pavala.malli@atomicmail ಎಂಬ ಇ-ಮೇಲ್ ಐಡಿಯಿಂದ ಬೆಳಗಿನ ಜಾವ 01:59 ಗಂಟೆಗೆ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬೆದರಿಕೆ ಸಂದೇಶ ರವಾನೆಯಾಗಿದೆ. ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್‌ನಲ್ಲಿ ಬರೆಯಲಾಗಿದೆ. ಬೆಳಗ್ಗೆ ಕಚೇರಿ ಆರಂಭದ ವೇಳೆ ಈ ಮೇಲ್ ಗಮನಿಸಿದ ನ್ಯಾಯಾಲಯದ ಸಿಬ್ಬಂದಿ ಕೂಡಲೇ ಮೈಸೂರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಎಸಿಪಿ ಕೆ.ಸಿ. ಪ್ರಕಾಶ್, ಇನ್ಸ್‌ಪೆಕ್ಟರ್ ಬಿ.ಎಸ್. ರವಿಶಂಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vishakha Bhat Heggar

View all posts by this author