Book Release: ಬೆಂಗಳೂರಿನಲ್ಲಿ ಮಾ.2 ರಂದು ʼಬೆಟ್ಟದ ಹೂವುʼ ಕೃತಿ ಲೋಕಾರ್ಪಣೆ
Book Release: ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿರಾಟ್ ಪದ್ಮನಾಭ ಬರೆದಿರುವ, ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ʼಬೆಟ್ಟದ ಹೂವು: ಆಧುನಿಕ ಭಾರತದ ಸಾಮಾಜಿಕ ರಾಮಾಯಣʼ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ್ 2 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ನ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.


ಬೆಂಗಳೂರು: ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿರಾಟ್ ಪದ್ಮನಾಭ ಬರೆದಿರುವ, ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ʼಬೆಟ್ಟದ ಹೂವು: ಆಧುನಿಕ ಭಾರತದ ಸಾಮಾಜಿಕ ರಾಮಾಯಣʼ ಕೃತಿಯ ಲೋಕಾರ್ಪಣೆ (Book Release) ಕಾರ್ಯಕ್ರಮ ಮಾರ್ಚ್ 2 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ನ ಕುವೆಂಪು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ಡಾ.ಟಿ.ಎಸ್. ನಾಗಾಭರಣ ಕೃತಿ ಬಿಡುಗಡೆಗೊಳಿಸುವರು. ಶಿವಮೊಗ್ಗದ ವಕೀಲರು, ಪತ್ರಕರ್ತ ವೀರೇಂದ್ರ ಪಿ.ಎಂ. ಕೃತಿಯ ವಿಶ್ಲೇಷಣೆ ಮಾಡುವರು.
ಈ ಸುದ್ದಿಯನ್ನೂ ಓದಿ | IDBI Bank Recruitment 2025: ಐಡಿಬಿಐ ಬ್ಯಾಂಕ್‌ನಲ್ಲಿದೆ 650 ಹುದ್ದೆ; ಮಾ. 1ರಿಂದ ಅಪ್ಲೈ ಮಾಡಿ
ಕಾರ್ಯಕ್ರಮದಲ್ಲಿ ಬೆಂಗಳೂರು ಆಕಾಶವಾಣಿ ಹಿರಿಯ ಉದ್ಘೋಷಕಿ ಬಿ.ಕೆ. ಸುಮತಿ, ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿರಾಟ್ ಪದ್ಮನಾಭ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ದೇವಸೂಗೂರಿನ ಶ್ರೀ ಸೂಗೂರೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ತ್ರಿವೇಣಿ ಹರ್ಷಿತಾ ಪಾಲ್ಗೊಳ್ಳಲಿದ್ದಾರೆ ಎಂದು ಸ್ನೇಹ ಬುಕ್ ಹೌಸ್‌ನ ಪ್ರಕಾಶಕ ಕೆ.ಬಿ. ಪರಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.