ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌; ಡಿಕೆಶಿ ಸೇರಿ ಹಲವರು ಭಾಗಿ

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ (CM Siddaramaiah) ಹಂತ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭಗೊಂಡಿದೆ. ಈ ಸಭೆಯ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಸಿಎಂ ಆಗಮನದ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು, 5 ವರ್ಷ ಸಿದ್ದು ಸಿಎಂ ಎಂದು ಘೋಷಣೆ ಕೂಗಿ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಉಪಹಾರ ಕೂಟಕ್ಕೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಉಪಮುಖ್ಯಮಂತ್ರಿ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂಬಿ.ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳುಗನ್ನು ಪರಿಗಣಿಸಲಾಗುತ್ತಿದೆ.

ಅಕ್ಟೋಬರ್‌ 28ರಂದು ಡಿಕೆಶಿ-ತೇಜಸ್ವಿ ಸೂರ್ಯ ಭೇಟಿ; ಸುರಂಗ ರಸ್ತೆ ಯೋಜನೆ ಬಗ್ಗೆ ಚರ್ಚೆ?

ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನೆಯಾಗಿದೆ. ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗುತ್ತಿದ್ದು, ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ವಿದಾಯ ಭಾಷಣ ಮಾಡಲಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಸಿಎಂ ಘೋಷಣೆ ಮಾಡಲಿದ್ದಾರೆ.

Vishakha Bhat Heggar

View all posts by this author