ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bus Fare Hike: ಇಂದು ಮಧ್ಯರಾತ್ರಿಯಿಂದಲೇ ಬಸ್ ಟಿಕೆಟ್‌ ದರ ಏರಿಕೆ; ಪರಿಷ್ಕೃತ ಪ್ರಯಾಣದರ ವಿವರ ಇಲ್ಲಿದೆ

Bus Fare Hike: ಜ.5ರಿಂದ ಪರಿಷ್ಕೃತ ಟಿಕೆಟ್ ದರ ಜಾರಿಗೆ‌ ಬರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಯಾಗಲಿದೆ.

Bus Fare Hike: ಇಂದು ಮಧ್ಯರಾತ್ರಿಯಿಂದಲೇ ಬಸ್ ಟಿಕೆಟ್‌ ದರ ಏರಿಕೆ; ಪರಿಷ್ಕೃತ ಪ್ರಯಾಣದರ ವಿವರ ಇಲ್ಲಿದೆ

Profile Prabhakara R Jan 4, 2025 7:09 PM
ಬೆಂಗಳೂರು: ಜನವರಿ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ದರ ಹೆಚ್ಚಳಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಶನಿವಾರ (ಜ.4) ಮಧ್ಯರಾತ್ರಿಯಿಂದಲೇ ಪರಿಷ್ಕೃತ ಟಿಕೆಟ್‌ ದರ (Bus Fare Hike) ಜಾರಿಯಾಗಲಿದೆ.
ಜ.5ರಿಂದ ಪರಿಷ್ಕೃತ ಟಿಕೆಟ್ ದರ ಜಾರಿಗೆ‌ ಬರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಯಾಗಲಿದ್ದು, ಟಿಕೆಟ್‌ ದರ ಎಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿದೆ.
image-3bbc0bcd-0935-4839-846d-f5193dc0038e.jpg
ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್‌. ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪಯಾಣದ ದರ ಪರಿಷ್ಕರಣೆ ಮಾಡಲಾಗಿತ್ತು. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ, ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ.
ಪ್ರಸ್ತುತ 9.56 ಕೋಟಿ ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ 3650 ಕೋಟಿ ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ ಶೇ.15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲು ಸಭೆಯು ನಿರ್ಣಯಿಸಿ, ಅದರಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.
ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಸುಮಾರು 64 ಲಕ್ಷ ಮಹಿಳಾ ಪ್ರಯಾಣಿಕರು ಆಯ್ದ ಅನುಸೂಚಿಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಾಲ್ಕು ನಿಗಮಗಳು ಸುಮಾರು 1,01,648 ಸಿಬ್ಬಂದಿ ಹೊಂದಿದ್ದು, ಆಯಾ ನಿಗಮಗಳು ಸಿಬ್ಬಂದಿ ಸಂಬಳ ಮತ್ತು ಎಲ್ಲಾ ಭತ್ಯೆಗಳನ್ನು ನಿಗಮಗಳ ಆದಾಯದ ಮೂಲಕ ಮಾತ್ರ ಪಾವತಿಸುತ್ತಿವೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ 2024-25ನೇ ಆರ್ಥಿಕ ವರ್ಷದ ಏಪ್ರಿಲ್‌ 1ರಿಂದ ನಿಂದ ನ.30ರವರೆಗೆ ಒಟ್ಟು ಆದಾಯ 8418.46 ಕೋಟಿಗಳಾಗಿದ್ದು, ಒಟ್ಟು 9511.41 ಕೋಟಿ ವೆಚ್ಚವನ್ನುಮಾಡಿರುತ್ತವೆ. ಪ್ರಸ್ತುತ 2024-25ನೇ ಆರ್ಥಿಕ ವರ್ಷದಲ್ಲಿ (ನವೆಂಬರ್‌ವರೆಗೆ) ನಿವ್ವಳ ಕೊರತೆಯು 1092.95ಕೋಟಿಗಳಷ್ಟಿರುತ್ತದೆ.
ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳು ಪ್ರಸ್ತುತ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಸಾರಿಗೆ ಸಂಸ್ಥೆಗಳಿಗೆ ಡೀಸೆಲ್ ಮತ್ತು ಸಿಬ್ಬಂದಿಗಳಿಗೆ ವೇತನ ಪಾವತಿಸುವುದು ಪ್ರಮುಖ ವೆಚ್ಚಗಳಾಗಿದ್ದು, ಎರಡು ವೆಚ್ಚಗಳು ಸೇರಿ ಒಟ್ಟು ಶೇಕಡ 90ರಷ್ಟು ವೆಚ್ಚ ಹೆಚ್ಚಳವಾಗಿರುತ್ತದೆ. ಆದ್ದರಿಂದ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಮುನ್ನಡೆಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಹಾಗೂ ಹಮ್ಮಿಕೊಳ್ಳಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಪ್ರಯಾಣಿಕ ಬಸ್‌ ದರಗಳನ್ನು ಶೇಕಡ 33ರಷ್ಟು ಹೆಚ್ಚಿಸಲು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಶೇಕಡ 42ರಷ್ಟು ಹೆಚ್ಚಿಸಲು ಅನುಮೋದನೆ ನೀಡಲು ಕೋರಿದ್ದವು. ಪ್ರಸ್ತಾವನೆಯನ್ನು ಪರಿಶೀಲಿಸಿ, ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಾಲ್ಕು ರಸ್ತೆ ಸಾರಿಗೆ ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Road Accident: ಬೆಂಗಳೂರಲ್ಲಿ ಭೀಕರ ಅಪಘಾತ; ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಅಕ್ಕ-ತಂಗಿ ದುರ್ಮರಣ