Crime News: ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಉದ್ಯಮಿಯ ಶವ ಪತ್ತೆ
ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಬಂದಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಸಾವಿನ ಕುರಿತಂತೆ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಉದ್ಯಮಿಯೊಬ್ಬರು (businessman) ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ (body found) ಘಟನೆ ರಾಜಧಾನಿಯಲ್ಲಿ (Bengaluru crime news) ನಡೆದಿದೆ. ಸಾವಿನ ಸುತ್ತ ಹಲವು ಅನುಮಾನಗಳು ಮೂಡತೊಡಗಿವೆ. ಮೃತ ವ್ಯಕ್ತಿಯನ್ನು ಮುತ್ಯಾಲ ನಗರದ ನಿವಾಸಿ ಅಶ್ವಿನ್ ಕುಮಾರ್ ಎಂದು ಗುರುತಿಸಲಾಗಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ.
ಶನಿವಾರ ರಾತ್ರಿ ಮನೆಯಿಂದ ಕಾರಿನಲ್ಲಿ ಹೊರಟಿದ್ದ ಅಶ್ವಿನ್ ಕುಮಾರ್ ತಡರಾತ್ರಿಯಾದರೂ ಮನೆಗೆ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ಅವರ ಮೊಬೈಲ್‍ಗೆ ಕರೆ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಿಗೇಹಳ್ಳಿ ಠಾಣೆ ಪೊಲೀಸರು ಮೊಬೈಲ್ ನಂಬರ್ ಪಡೆದು ಕಾರ್ಯಾಚರಣೆ ಕೈಗೊಂಡಾಗ ಅಶ್ವಿನ್ ಕುಮಾರ್ ಅವರು ತಿಂಡ್ಲು ಮುಖ್ಯ ರಸ್ತೆಯ ಮೇಲೇತುವೆ ಬಳಿ ಇರುವುದು ಗೊತ್ತಾಗಿ ರಾತ್ರಿ ಸುಮಾರು 11.30ರಲ್ಲಿ ಅಲ್ಲಿಗೆ ಹೋಗಿದ್ದಾರೆ.
ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಬಂದಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಸಾವಿನ ಕುರಿತಂತೆ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಅಥವಾ ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.
ಅಂಬೇಡ್ಕರ್ ಕುರಿತು ವ್ಯಂಗ್ಯ ನಾಟಕ: ಜೈನ್ ವಿವಿ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದು
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ಪ್ರಕರಣ ರದ್ದು ಮಾಡಿದೆ. ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ, ಪ್ರಕರಣವನ್ನು ಮುಂದುವರಿಸಲು ಅವಕಾಶ ನೀಡುವುದು "ಕಾನೂನು ಪ್ರಕ್ರಿಯೆಯ ದುರುಪಯೋಗ"ಕ್ಕೆ ಸಮನಾಗಿರುತ್ತದೆ ಎಂದು ಹೇಳಿದೆ.
ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯೂನಿವರ್ಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಯೂತ್ ಫೆಸ್ಟ್ ಅಂಗವಾಗಿ ಫೆಬ್ರವರಿ 6ರಂದು ಆಯೋಜಿಸಲಾಗಿದ್ದ ಸ್ಕಿಟ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಬಳಸಿದ್ದ ಕೆಲ ಪದಗಳು ದಲಿತ ಸಂಘಟನೆಗಳನ್ನ ಕೆರಳಿಸಿತ್ತು. ಫೆ. 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮ್ಯಾಡ್ ಆ್ಯಡ್ ಪ್ರದರ್ಶನದಲ್ಲಿ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Road Accident: ಗಡಿ ಭಾಗದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು