ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಸಮರದ ಫಲಿತಾಂಶ (By election 2026 Results) ಹೊರಬರಲಿದ್ದು, ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು. ಇಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾಧಿಕಾರಿಗಳು, ಅಭ್ಯರ್ಥಿಗಳು ಹಾಗೂ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್ ಆಗಿದ್ದು, ಡಿಆರ್‌ಆರ್ ಶಾಲೆಯಲ್ಲಿ ನಡೆಯುವ ಮತಎಣಿಕೆ ಕಾರ್ಯ ಶುರುವಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದು, ಶ್ರೀನಿವಾಸ ದಾಸ ಕರಿಯಪ್ಪ ಹಿನ್ನಡೆಯಲ್ಲಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಮುನ್ನಡೆಯಲ್ಲಿದ್ದು, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆಯಲ್ಲಿದ್ದಾರೆ. ಮೊದಲಿಗೆ ಅಂಚೆ ಮತಗಳನ್ನ ಎಣಿಕೆ ಮಾಡಲಾಗಿದೆ. ಒಟ್ಟು 260 ಅಂಚೆ ಮತಗಳ ಚಲಾವಣೆ ಆಗಿದೆ. ಚಲಾವಣೆ ಆಗಿರೋ ಸೇವಾ ಮತಗಳ 124 ಇದ್ದು, ಒಟ್ಟು 384 ಮತಗಳ ಎಣಿಕೆ ಕಾರ್ಯ ನಡೆದಿದೆ.