ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)

ಬೆಂಗಳೂರು, ಜು.27: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ತಿಳಿಸಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, ʼಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿʼ ಎಂದು ಹೇಳಿದರು.

ದೆಹಲಿಯಲ್ಲಿ ಸಂಸದರ ಜತೆಗಿನ ಸಭೆ ಬಗ್ಗೆ ಕೇಳಿದಾಗ, ʼಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆʼ ಎಂದು ತಿಳಿಸಿದರು.

ಹಿರಿಯೂರಿನ 114 ಕೆರೆ ತುಂಬಿಸುವುದು ಸುಧಾಕರ್ ಕನಸು, ಯೋಜನೆಗೆ 244 ಕೋಟಿ ರೂ.: ಸಿಎಂ

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.