ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಂಪುಟ ಮುಂದೂಡಿಕೆ ?

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆಯ ವಿಶ್ವಾಸದಲ್ಲಿ ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವಾ ಕಾಂಕ್ಷಿಗಳಿಗೆ ಕೊಂಚ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಮರಳಿದ್ದರಿಂದ ಪಟ್ಟಿ ಪರಿಷ್ಕರಣೆ ಚರ್ಚೆ ಪೂರ್ಣ ಗೊಂಡಿಲ್ಲ. ಆದ್ದರಿಂದ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

ವಿಸ್ತರಣೆ ಚರ್ಚೆ ನಡೆಯುತ್ತಿದ್ದಾಗಲೇ ಬೆಂಗಳೂರಿಗೆ ಖರ್ಗೆ ವಾಪಸ್, ಚರ್ಚೆ ಅಪೂರ್ಣ

ಪಟ್ಟಿಯಲ್ಲಿ ಹೊಸಬರಿಗೆ ಆದ್ಯತೆ ನೀಡಲು ರಾಹುಲ್ ಸೂಚನೆ, 12 ಹೊಸಬರಿಗೆ ಪಟ್ಟ?

ಪಟ್ಟಿ ಅಂತಿಮ ಎಂಬ ಗುಸುಗುಸುಗಳ ನಡುವೆ ಇಂದೂ ಕಸರತ್ತು ಮುಂದುವರಿಕೆ

ಬೆಂಗಳೂರು: ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆಯ ವಿಶ್ವಾಸದಲ್ಲಿ ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವಾ ಕಾಂಕ್ಷಿಗಳಿಗೆ ಕೊಂಚ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಮರಳಿದ್ದರಿಂದ ಪಟ್ಟಿ ಪರಿಷ್ಕರಣೆ ಚರ್ಚೆ ಪೂರ್ಣ ಗೊಂಡಿಲ್ಲ. ಆದ್ದರಿಂದ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಬುಧವಾರ ದೆಹಲಿಗೆ ತೆರಳಿದ್ದ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚೆ ನಡೆಸಿದರು. ಆದರೆ ವೈಯಕ್ತಿಕ ಕಾರಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ವಾಪಸಾಗಿರುವುದರಿಂದ ಚರ್ಚೆ ಅಪೂರ್ಣಗೊಂಡಿದೆ.

ಇದರ ಹೊರತಾಗಿಯೂ ರಾಜ್ಯ ನಾಯಕರು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೆಲವು ಮೂಲಗಳು ಸಚಿವರ ಪಟ್ಟಿ ಅಂತಿಮಗೊಂಡಿದೆ ಎಂದೂ ಹೇಳಿವೆ. ಆದರೆ ಯಾವುದೇ ಅಽಕೃತ ಮಾಹಿತಿ ಹೊರಬಿದ್ದಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಽ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: Bangalore News: ಹೊಸೂರಿನಲ್ಲಿ ಬೃಹತ್ 'ಏರೋಸ್ಪೇಸ್-ಡಿಫೆನ್ಸ್' ಘಟಕದ ನಿರ್ಮಾಣಕ್ಕೆ ಚಾಲನೆ ನೀಡಿದ ಬೆಂಗಳೂರಿನ 'ಹಿಕಲ್ ಟೆಕ್ನಾಲಜೀಸ್'

ಇಬ್ಬರೂ ಪ್ರತ್ಯೇಕ ಪಟ್ಟಿ ನೀಡಿದ್ದು, ಅದಾದ ಬಳಿಕ ಇಬ್ಬರನ್ನು ಕೂರಿಸಿಕೊಂಡು ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿ ಭೇಟಿಗೂ ಮೊದಲು ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ಸಭೆ ನಡೆಸಿ, ಸಂಪುಟವನ್ನು ವಿಸ್ತರಿಸಿ, ಯಾರನ್ನು ಸಚಿವ ರನ್ನಾಗಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು.

ಆದರೆ ರಾಹುಲ್ ಗಾಂಧಿಯೊಂದಿಗೆ ಸಭೆ ನಡೆಸುವ ಹೊತ್ತಿಗೆ ಕೌಟುಂಬಿಕ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರಿಂದ ಚರ್ಚೆ ಅಪೂರ್ಣ ಗೊಂಡಿದೆ. ಆದ್ದರಿಂದ ಸಂಪುಟ ವಿಸ್ತರಣೆ ಕನಿಷ್ಠ ಮೂರ‍್ನಾಲ್ಕು ದಿನಕ್ಕೆ ಮುಂದೆ ಹೋಗಿದೆ. ತಡರಾತ್ರಿ ಸಿಎಂ ಡಿ.ಕೆ.ಶಿವ ಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ವಾಪಾಸಾಗಿದ್ದಾರೆ.

ಮುಂದಿನ ವಾರ ಮತ್ತೊಂದು ಸಭೆ ನಡೆಸಿ ಅಂತಿಮ ತೀರ್ಮಾನ ಮಾಡಲಿದ್ದಾರೆ. ಹೊಸಬರಿಗೆ ಆದ್ಯತೆ ನೀಡಿ: ಇನ್ನು ರಾಹುಲ್ ಗಾಂಽ ಅವರೊಂದಿಗೆ ಸಿಎಂ, ಮಾಜಿ ಸಿಎಂ ಸಭೆ ನಡೆಸಿದಾಗ ರಾಜ್ಯ ನಾಯಕರು ಒಂದು ಪಟ್ಟಿಯನ್ನು ನೀಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಹೊಸಬರಿಗಿಂತ ಹಳಬರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದನ್ನು ಗಮನಿಸಿದ ರಾಹುಲ್ ಗಾಂಧಿ ಇನ್ನೊಂದು ಪಟ್ಟಿ ಸಿದ್ಧಪಡಿಸಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ.

ಇದರಿಂದ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿದ್ದ 11 ಸಚಿವರು ಮಾತ್ರ ಸಂಪುಟದಲ್ಲಿ ಮುಂದು ವರಿಯಲಿದ್ದಾರೆ. ಬಾಕಿಯಂತೆ ಹಿಂದಿನ ಸಂಪುಟದಲ್ಲಿದ್ದ ಐದಾರು ಸಚಿವರಿಗಷ್ಟೇ ಮತ್ತೆ ಸಚಿವರಾಗುವ ಭಾಗ್ಯ ಸಿಗಲಿದೆ. ಉಳಿದಂತೆ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆಗಳಿವೆ. ಸಚಿವ ಸಂಪುಟದಲ್ಲಿ ೨೦ ಸ್ಥಾನಗಳು ಖಾಲಿಯಿದ್ದು, ಈ ಇಪ್ಪತ್ತು ಸ್ಥಾನಗಳಲ್ಲಿ ಕನಿಷ್ಠ 10 ರಿಂದ 12 ಮಂದಿ ಹೊಸಬರಿಗೆ ಸಚಿವ ಪಟ್ಟ ಸಿಗುವುದು ಬಹುತೇಕ ನಿಶ್ಚಿತ ಎಂದು ಹೇಳಲಾಗಿದೆ.

ಗುರುವಾರ ತಡರಾತ್ರಿ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆಯಾಗಲಿದ್ದು, ಈ ಸಭೆಯ ಬಳಿಕ ಸಂಪುಟಕ್ಕೆ ಯಾರೆಲ್ಲ ಸೇರ್ಪಡೆಯಾಗಲಿದ್ದಾರೆ? ಹೈಕಮಾಂಡ್ ಯಾರ ಹೆಸರನ್ನು ಶಿಫಾರಸು ಮಾಡಲಿದ್ದಾರೆ? ಎನ್ನುವ ಸ್ಪಷ್ಟನೆ ಸಿಗಲಿದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿರುವುದರಿಂದ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವುದಿಲ್ಲ. ಖರ್ಗೆ ಅವರು ದೆಹಲಿಗೆ ವಾಪಸಾದ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿದ ಬಳಿಕವೇ, ಸ್ಪಷ್ಟನೆ ಸಿಗಲಿದೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಬೀಡುಬಿಟ್ಟ ಆಕಾಂಕ್ಷಿಗಳು

ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನ ಕಾಂಗ್ರೆಸ್ ಶಾಸಕರ ದೆಹಲಿ ಪರೇಡ್ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಶಾಸಕರು ದೆಹಲಿಯ ಬೀಡುಬಿಟ್ಟಿದ್ದು, ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

image

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಮರಳಿದ್ದರಿಂದ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ. ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿದ್ದೇವೆ. ರಾಹುಲ್ ಗಾಂಧಿ ಅವರು ನಮ್ಮ ಅಭಿಪ್ರಾಯ ಗಳನ್ನು ಪಡೆದುಕೊಂಡಿದ್ದಾರೆ. ಖರ್ಗೆ ಅವರು ಬೆಂಗಳೂ ನಿಂದ ವಾಪಸಾದ ಬಳಿಕ ಈ ಬಗ್ಗೆ ಚರ್ಚಿಸಿ ಮುಂದಿನ ದಿನಾಂಕ ತಿಳಿಸಿದಾಗ ದೆಹಲಿಗೆ ಬಂದು ಅಂತಿಮ ಗೊಳಿಸುತ್ತೇವೆ.

-ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ