ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tejasvi Surya: ಕೆಪಿಎಸ್‌ಸಿ ಹಗರಣಗಳು ನಿಮಗೆ ಕಾಣುತ್ತಿಲ್ಲವೇ?: ಸಿಎಂ ಡಿಕೆಶಿ ವಿರುದ್ಧ ಲೋಕಸಭೆಯಲ್ಲಿ ಸಿಡಿದೆದ್ದ ತೇಜಸ್ವಿ ಸೂರ್ಯ

KPSC Recruitment Scam:‌ ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ಬಗ್ಗೆ ಲೋಕಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರಸ್ತಾಪಿಸಿ, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿಗದಿತ ದರಪಟ್ಟಿಯಲ್ಲಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಅವಕಾಶವೇ ?ಲಕ್ಷಾಂತರ ನಿರುದ್ಯೋಗಿ ಯುವಕರ ಕಣ್ಣೀರು ಮತ್ತು ಅವರ ಕುಟುಂಬಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದ್ದಾರೆ.

ಸಿಎಂ ಡಿಕೆಶಿ ವಿರುದ್ಧ ಲೋಕಸಭೆಯಲ್ಲಿ ಸಿಡಿದೆದ್ದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಮತ್ತು ಸಿಎಂ ಡಿ.ಕೆ.ಶಿವಕುಮಾರ್‌ -

Prabhakara R
Prabhakara R Jul 28, 2026 9:29 PM

ನವದೆಹಲಿ: ಕರ್ನಾಟಕದಲ್ಲಿ ನಡೆದಿರುವ ನೇಮಕಾತಿ ಅಕ್ರಮಗಳ (KPSC Recruitment Scam) ವಿರುದ್ಧ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಲೋಕಸಭೆಯಲ್ಲಿ (Parliament Monsoon Session 2026) ಮಂಗಳವಾರ ಆಕ್ರೋಶ ಹೊರಹಾಕಿದ್ದಾರೆ. ಸದನದಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ವಿಧೇಯಕದ ಬಗ್ಗೆ ನಡೆದ ಚರ್ಚೆ ವೇಳೆ ಕನ್ನಡದಲ್ಲೇ ಮಾತನಾಡಿರುವ ಅವರು, ನೀಟ್‌ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ ಎಂದು ಬೆಂಗಳೂರಿನಿಂದ ದೆಹಲಿಗೆ ಬಂದು ಪ್ರತಿಭಟನೆ ಮಾಡುವ ಕರ್ನಾಟಕದ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ, ಕೆಪಿಎಸ್‌ಸಿ ಹಗರಣಗಳ ವಿರುದ್ಧ ರಾಜ್ಯದ ಮೂಲೆಮೂಲೆಯಲ್ಲೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ! ದೆಹಲಿಗೆ ಬಂದು ನ್ಯಾಯದ ನಾಟಕವಾಡುವ ನಿಮಗೆ, ಕರ್ನಾಟಕದಲ್ಲಿ KPSC ಯನ್ನು ಬಟಾಬಯಲಾಗಿ 'ಹರಾಜು ಮಾರುಕಟ್ಟೆ' ಮಾಡಿರುವುದು ಅನ್ಯಾಯ ಅಂತ ಅನ್ನಿಸುವುದಿಲ್ಲವೇ?, 80 ಲಕ್ಷ ರೂಪಾಯಿ ಚೆಲ್ಲಿದವರಿಗೆ ಮಾತ್ರ ಸರ್ಕಾರಿ ಹುದ್ದೆ ಎನ್ನುವುದಾದರೆ, ಹಗಲಿರುಳು ಕಷ್ಟಪಟ್ಟು ಓದುವ ಬಡವರ ಮತ್ತು ಶ್ರಮಜೀವಿಗಳ ಮಕ್ಕಳ ಭವಿಷ್ಯವೇನು? ಅವರ ಅರ್ಹತೆಗೆ ನಿಮ್ಮ ಸರ್ಕಾರದ ದರಪಟ್ಟಿಯಲ್ಲಿ ಬೆಲೆಯೇ ಇಲ್ಲವೇ ಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ಕಿಡಿಕಾರಿದ್ದಾರೆ.

ಕೇವಲ KPSC ಅಧ್ಯಕ್ಷರ ಅಮಾನತಿನಿಂದ ಈ ಬೃಹತ್ ಅಕ್ರಮದ ಕಳಂಕ ಮುಚ್ಚಿಹೋಗುತ್ತದೆಯೇ? ಕಾಂಗ್ರೆಸ್ ಸರ್ಕಾರದ ನಿಗದಿತ ದರಪಟ್ಟಿಯಲ್ಲಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಅವಕಾಶವೇ ?ಲಕ್ಷಾಂತರ ನಿರುದ್ಯೋಗಿ ಯುವಕರ ಕಣ್ಣೀರು ಮತ್ತು ಅವರ ಕುಟುಂಬಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಸಂಸದ ಆಗ್ರಹಿಸಿದ್ದಾರೆ.



ಒಂದೊಂದು ಸೀಟಿಗೆ 80 ಲಕ್ಷ ರೂ. ವಸೂಲಿ!

ʼ10 ದಿನಗಳ ಹಿಂದೆ KPSC ಅಧ್ಯಕ್ಷರನ್ನು ಅಮಾನತು ಮಾಡಲಾಗಿದೆ. ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಮಾಡಿಸಿ, ಹುದ್ದೆ ಕೊಡಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಕೆಪಿಎಸ್‍ಸಿ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಒಂದೊಂದು ಹುದ್ದೆಗೆ 80 ಲಕ್ಷ ರೂ. ವಸೂಲಿ ಮಾಡಿದ ಆರೋಪವೂ ಕೇಳಿಬಂದಿದೆ.

ನಮ್ಮ ತಂದೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದು ಕೆಪಿಎಸ್‌ಸಿ ಪರೀಕ್ಷೆ ಬರೆದು ಸರ್ಕಾರಿ ಅಧಿಕಾರಿಯಾದರು. ಇವತ್ತು ಅವರ ಮಗನಾದ ನಾನು ಸಂಸದನಾಗಿದ್ದೇನೆ. ಹೀಗಾಗಿ ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಪ್ರಶ್ನಿಸುತ್ತಿದ್ದೇನೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಬೇಕುʼ ಎಂದು ಆಗ್ರಹಿಸಿದ್ದಾರೆ.

ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ನೋಡುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ ಮತ್ತು ಶಾಶ್ವತ ಪರಿಹಾರ ಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಿದೆ ಎಂಬ ನಂಬಿಕೆ ವಿದ್ಯಾರ್ಥಿಗಳಲ್ಲಿದೆ ಎಂದು ಹೇಳಿದರು.



ಕಳೆದ ಒಂದು ವಾರದಿಂದ ವಿರೋಧ ಪಕ್ಷಗಳು ಪೇಪರ್ ಲೀಕ್ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದ್ದವು. ಆದರೆ ಸರ್ಕಾರವೇ ಕಠಿಣ ಕಾನೂನು ತಿದ್ದುಪಡಿ ವಿಧೇಯಕ ತಂದು ಚರ್ಚೆಗೆ ಅವಕಾಶ ನೀಡಿದಾಗ, ಅದೇ ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.

Readers Colony: ನೀಟ್ ಸುಧಾರಣೆ ನಿರೀಕ್ಷೆ

ಪೇಪರ್ ಲೀಕ್‌ನಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸಾಮಾನ್ಯ ಮತ್ತು ಬಡ ಕುಟುಂಬಗಳ ಮಕ್ಕಳಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆಯೇ ಬದುಕು ಕಟ್ಟಿಕೊಳ್ಳುವ ದೊಡ್ಡ ಅವಕಾಶವಾಗಿದೆ. ಅದನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.