ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

canter accident: ಬೆಂಗಳೂರಿನಲ್ಲಿ ಮತ್ತೊಂದು ಕ್ಯಾಂಟರ್‌ ದುರಂತ, ಆಟೋದಲ್ಲಿದ್ದ ಇಬ್ಬರು ಸಾವು

Canter Accident: ಬೆಂಗಳೂರಿನ ಸುಮನಹಳ್ಳಿಯಲ್ಲಿ ಆಟೋ, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಡಿಕ್ಕಿ ಆದ ರಭಸಕ್ಕೆ ಆಟೋ ಎರಡು ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು : ನಿನ್ನೆ ಹಾಸನದಲ್ಲಿ ನಡೆದ ಭೀಕರ ಕ್ಯಾಂಟರ್‌ ದುರಂತದ (canter accident) ನೆನಪು ಮಾಸುವ ಮುನ್ನವೇ, ಬೆಂಗಳೂರಿನಲ್ಲಿ (bengaluru) ಇನ್ನೊಂದು ಕ್ಯಾಂಟರ್‌ ಅಪಘಾತ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಆಟೋ, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್ ಡಿಕ್ಕಿ ಆದ ರಭಸಕ್ಕೆ ಆಟೋ ಎರಡು ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂಭ್ರಮದಲ್ಲಿದ್ದವರ ಮೇಲೆ ಕ್ಯಾಂಟರ್‌ ಹರಿದು, 9 ಮಂದಿ ಸತ್ತಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿವೆ.

ಇದನ್ನೂ ಓದಿ: Hassan tragedy: ಹಾಸನ ಗಣೇಶ ಮೆರವಣಿಗೆ ವೇಳೆ ಟ್ರಕ್‌ ಹರಿದು ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಹರೀಶ್‌ ಕೇರ

View all posts by this author