ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೇ ಕಾಶ್ಮೀರದಲ್ಲಿ ದಾಳಿ ; ಪೋಸ್ಟ್ ಮಾಡಿದ ಕರ್ನಾಟಕ ಬಿಜೆಪಿ ಐಟಿ ಸೆಲ್​​ ವಿರುದ್ಧ ಕೇಸ್

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಹುಲ್‌ ಗಾಂಧಿಗೂ, ಪಹಲ್ಗಾಮ್‌ ದಾಳಿಗೂ ಲಿಂಕ್‌; ಬಿಜೆಪಿ ಮೇಲೆ ಎಫ್‌ಐಆರ್‌

Profile Vishakha Bhat Apr 24, 2025 7:39 PM

ಬೆಂಗಳೂರು: ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಗಳಿಗೆ ಹೋದಾಗಲೆಲ್ಲಾ ಕಾಶ್ಮೀರದಲ್ಲಿ ಒಂದಲ್ಲಾ ಒಂದು ದಾಳಿ ನಡೆಯುತ್ತದೆ ಎಂದು ಕರ್ನಾಟಕ ಬಿಜೆಪಿ ಐಟಿ ಸೆಲ್ (Karnataka BJP)​​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಭಾರೀ ವಿವಾದಕ್ಕೀಡಾಗಿದೆ. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ ಸಿ.ಎಂ. ಧನಂಜಯ ಅವರು ದೂರು ನೀಡಿದ್ದಾರೆ.

ಬಿಜೆಪಿ ಸೆಲ್‌ ಹಾಕಿದ್ದ ಪೋಸ್ಟ್‌ನಲ್ಲಿ ಪಹಲ್ಗಾಮ್, ಕಾಶ್ಮೀರದಲ್ಲಿ ನಡೆದ ಉಗ್ರದಾಳಿಯ ಹಿನ್ನೆಲೆಯಲ್ಲಿಯೇ ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಸೇರಿಸಿ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದಾಗ ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದಿದ್ದು, ಪ್ರತೀ ಬಾರಿಯೂ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದಾಗ ಈ ರೀತಿಯ ಘಟನೆಗಳು ಸಂಭವಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿ ಈ ಪೋಸ್ಟ್ ಬಗ್ಗೆ ಕಾಂಗ್ರೆಸ್​​ ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಾನೂನು ಘಟಕದ ಸಿ ಎಂ ಧನಂಜಯ ಅವರು ಈ ಬಗ್ಗೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇಂತಹ ಪೋಸ್ಟ್​ಗಳಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹಾಳಾಗಿ, ಗುಂಪುಗಳ ನಡುವೆ ಘರ್ಷಣೆ ಉಂಟಾಗುತ್ತೆ ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ: Pahalgam terror attack: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಪಾಕಿಸ್ತಾನಿ ಸೆಲೆಬ್ರಿಟಿಗಳು

ಈ ಘಟನೆಯಿಂದ ಸಾರ್ವಜನಿಕ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಷ್ಟ್ರದ ಸಮಗ್ರತೆಯನ್ನು ಕಾಪಾಡುವಲ್ಲಿನ ತನ್ನ 'ವೈಫಲ್ಯ'ದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯ ಪ್ರಯತ್ನ ಇದಾಗಿದೆ ಎಂದು ಧನಂಜಯ ಆರೋಪಿಸಿದರು.ದೂರಿನ ಆಧಾರದ ಮೇಲೆ, ಹೈಗ್ರೌಂಡ್ಸ್ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196 ಮತ್ತು 353(2) ರ ಅಡಿಯಲ್ಲಿ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡಲು ಪ್ರಕರಣ ದಾಖಲಿಸಿದ್ದಾರೆ.