ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಪ್ರಕರಣ; ಪತ್ನಿಯಿಂದ ಬಯಲಾಯ್ತು ಡಿಐಜಿ ಕಳ್ಳಾಟ

ಸುಪ್ರೀಂ ಕೋರ್ಟ್‌ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಕಾರಾಗೃಹ ಇಲಾಖೆಯ ಡಿಐಜಿ (DIG) ಎಂ. ಸೋಮಶೇಖರ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಡಿಐಜಿ ಸೋಮಶೇಖರ್‌ ಕಳ್ಳಾಟ ಬಯಲಾಗಿದ್ದೇಗೆ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 7, 2026 11:12 AM

ಬೆಂಗಳೂರು: ಸುಪ್ರೀಂ ಕೋರ್ಟ್‌ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಕಾರಾಗೃಹ ಇಲಾಖೆಯ ಡಿಐಜಿ (DIG) ಎಂ. ಸೋಮಶೇಖರ್ (DIG Somashekhara) ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಲವು ಸ್ಫೋಟಕ ವಿಚಾರಗಳು ಬಯಲಾಗಿವೆ. ಬಿಡುಗಡೆ ನಂತರ ಪತ್ನಿಗೆ ಕೈದಿ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗವಾಗಿದೆ ಎನ್ನಲಾಗಿದ್ದು, ಪತಿ ಮತ್ತೊಂದು ಮದುವೆಯಾಗಿದ್ದಕ್ಕೆ ಕೆರಳಿ ಪತ್ನಿ ಸತ್ಯ ಹೇಳಿದ್ದಾರೆ ಎನ್ನಲಾಗಿದೆ.

ಕೈದಿಯ ಬಿಡುಗಡೆಗೆ ಪ್ರತಿಯಾಗಿ ಡಿಐಜಿ ಸೋಮಶೇಖರ್ ಅವರು ಕೈದಿಯ ಪತ್ನಿಯಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಆಕೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಡಿಯೋ ಕಾಲ್ ಮೂಲಕವೂ ಆಕೆಗೆ ಕಿರುಕುಳ ನೀಡುತ್ತಿದ್ದರೆಂದು ವರದಿಯಾಗಿದೆ. ಮತ್ತೊಂದು ಮದುವೆಯಾಗಿದ್ದ. ಇದರಿಂದ ಆಕ್ರೋಶಗೊಂಡ ಮೊದಲ ಪತ್ನಿ (ಯಾರನ್ನು ಡಿಐಜಿ ಶೋಷಿಸಿದ್ದರೋ ಆಕೆ), ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಅನಾಮಧೇಯ ಪತ್ರ ಹಾಗೂ ದೂರು ನೀಡುವ ಮೂಲಕ ಪತಿಯ ಅಕ್ರಮ ಬಿಡುಗಡೆ ಮತ್ತು ಡಿಐಜಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲಿಗೆಳೆದಿದ್ದಾಳೆ.

ಜೈಲಿನ ಅಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶದ ನಕಲಿ ಪ್ರತಿಯನ್ನು ಪರಿಶೀಲಿಸಿದಾಗ ವಂಚನೆ ನಡೆದಿರುವುದು ದೃಢಪಟ್ಟಿದೆ. ತನಿಖೆ ನಡೆಸಿದ ಎಲೆಕ್ಟ್ರಾನಿಕ್ಸ್ ಸಿಟಿ ಡಿಸಿಪಿ ಎಂ. ನಾರಾಯಣ ನೇತೃತ್ವದ ವಿಶೇಷ ಪೊಲೀಸ್ ತಂಡವು ಪ್ರಸ್ತುತ ಕಲಬುರಗಿ ವಲಯದಲ್ಲಿದ್ದ ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಿದೆ. ಪ್ರಸ್ತುತ ಪೊಲೀಸರು ಸೋಮಶೇಖರ್ ಅವರ ಮೊಬೈಲ್ ಕರೆಗಳು, ಸಂದೇಶಗಳು ಹಾಗೂ ಡಿಜಿಟಲ್ ಪುರಾವೆಗಳನ್ನು ತೀವ್ರವಾಗಿ ಪರಿಶೀಲಿಸುತ್ತಿದ್ದು, ಈ ಜಾಲದಲ್ಲಿ ಜೈಲು ಇಲಾಖೆಯ ಇನ್ನುಳಿದ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಿಡುಗಡೆ: ಡಿಐಜಿ ಸೋಮಶೇಖರ್ ಅರೆಸ್ಟ್

ನ್ಯಾಯಾಲಯದ ಆದೇಶದಂತೆ ಆರೋಪಿ ಡಿಐಜಿ ಎಂ. ಸೋಮಶೇಖರ್ ಅವರನ್ನು ಅಕ್ಟೋಬರ್ 5ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ಅಕ್ಟೋಬರ್ 9ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ನ ಆದೇಶ ತಲುಪಿದಾಗ ಜೈಲಿನ ನಿಯಮಾವಳಿಗಳ ಪ್ರಕಾರ ಪರಿಶೀಲನೆ ನಡೆಸದ ಇಲಾಖೆಯ ಇನ್ನುಳಿದ ಅಧಿಕಾರಿಗಳು ಯಾರು ಎಂಬುದರ ಕುರಿತು ಸೋಮಶೇಖರ್ ಸಮ್ಮುಖದಲ್ಲೇ ವಿಚಾರಣೆ ನಡೆಸಲಾಗುತ್ತಿದೆ.