ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕ ಪಡೆದ ಪ್ರತೀ ತಾಲೂಕು ಹಾಗೂ ಪ್ರತೀ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ʼಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮʼ ಕ್ರಿಯಾ ಯೋಜನೆಯ ಪ್ರೋತ್ಸಾಹಕ ಕಾರ್ಯಕ್ರಮದಡಿ (State Scholarship Portal-SSP) ಮೂಲಕ ನೇರವಾಗಿ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ 50,000 ನಗದು ಪುರಸ್ಕಾರವನ್ನು DBT ಮೂಲಕ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2025ರ ನವೆಂಬರ್ 14ರಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ʼಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಕ್ಕೆ ಚಾಲನೆ ನೀಡಿದ್ದರು. ಆದರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರು, ಈ ಯೋಜನೆಯಡಿ ಲ್ಯಾಪ್‌ಟಾಪ್‌ಗಳನ್ನು ವಿತರಿಸುವ ಪದ್ಧತಿ ಪ್ರಸ್ತುತ ಜಾರಿಯಲ್ಲಿದ್ದು, ಇದರ ಬದಲು ನಗದು ಪುರಸ್ಕಾರವನ್ನು ವಿತರಿಸಲು ಸರ್ಕಾರ ಅನುಮೋದನೆ ನೀಡಬೇಕು ಎಂದು ಕೋರಿದ್ದರು.
Cabinet Meeting: ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ
ಇದೀಗ ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೀಗಾಗಿ ಕಾರ್ಯಕ್ರಮದ ಅನುಷ್ಠಾನಕ್ಕೆ ನಿಗದಿಯಾಗಿದ್ದ 3.25 ಕೋಟಿ ವೆಚ್ಚದಲ್ಲಿ ಲ್ಯಾಪ್‌ಪ್‌ಗಳನ್ನು ವಿತರಿಸುವ ಬದಲು ಒಟ್ಟು 758 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ಪ್ರತಿ ವಿದ್ಯಾರ್ಥಿಗೆ 50,000 ಮೊತ್ತವನ್ನು ಬ್ಯಾಂಕ್ ಖಾತೆಗೆ DBT ಮೂಲಕ ವಿತರಿಸಲು ಮತ್ತು ಕೊರತೆಯಾಗುವ ಅನುದಾನವನ್ನು ಮಂಡಲಿಯ ಸ್ವಂತ ಮೂಲಗಳಿಂದ ಭರಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಿಗೆ ಅನುಮತಿ ನೀಡಿ ಆದೇಶಿಸಲಾಗಿದೆ.
19,64,507 ಹೆಣ್ಣುಮಕ್ಕಳಿಗೆ ಉಚಿತ ಶುಚಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್
ಬೆಂಗಳೂರು: ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ಒದಗಿಸಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಅದೇ ರೀತಿ ʼಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಸಚಿವರು ಹೇಳಿದ್ದಾರೆ.