ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ವಿವಿಧ ದರ್ಜೆಯ ಅಧಿಕಾರಿ, ಸಿಬ್ಬಂದಿಗೆ ರಾಜ್ಯ ಸರ್ಕಾರ ನಗದು ಬಹುಮಾನ (Cash reward) ಘೋಷಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ (Prajwal Revanna case) ಸೇರಿ ಹಲವಾರು ಪ್ರಕರಣಗಳ ಪರಿಣಾಮಕಾರಿ ತನಿಖೆ ಮತ್ತು ವಿಚಾರಣೆಯನ್ನು ಗುರುತಿಸಿ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಗದು ಬಹುಮಾನಗಳನ್ನು ಮಂಜೂರು ಮಾಡಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಡಿಜಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳಿಗೆ ತಲಾ 20,000 ರೂ.ನಂತೆ ಒಟ್ಟು 25 ಲಕ್ಷ ರೂ. ನೀಡಲಾಗುತ್ತದೆ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳಿಗೆ ತಲಾ 8,000 ರೂ.ನಂತೆ ಒಟ್ಟು 3 ಲಕ್ಷ ರೂ. ನೀಡಲಾಗುವುದು. ಇಲಾಖೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಲಾ 5,000 ರೂ.ನಂತೆ ಒಟ್ಟು 2 ಲಕ್ಷ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5,000 ರೂ.ನಂತೆ 1 ಲಕ್ಷ ನೀಡಲಾಗುತ್ತದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ನೀಡಲು ಒಟ್ಟಾರೆ 35 ಲಕ್ಷ ರೂ. ನಗದು ಬಹುಮಾನಗಳನ್ನು ಘೋಷಿಸಲಾಗಿದೆ.
ಹಾಸನ ಜಿಲ್ಲಾ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು, ಪ್ರಜ್ವಲ್ ರೇವಣ್ಣ ವಿರುದ್ಧದ 4 ಪಕರಣ ಮತ್ತು ಎಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ 1 ಪ್ರಕರಣದ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಒಟ್ಟು 05 ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಪ್ರಕರಣಗಳ ಪೈಕಿ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ವಿಚಾರಣೆ ಪೂರ್ಣಗೊಂಡು ಆರೋಪಿ ಪ್ರಜ್ವಲ್ ರೇವಣ್ಯ, ತಂದೆ ಎಚ್.ಡಿ ರೇವಣ್ಣ ಅವರು ಮಾಡಿರುವ ಕೃತ್ಯ ಸಾಬೀತಾಗಿದ್ದರಿಂದ ಅಪರಾಧಿಗೆ ಆಜೀವ ಕಾರಾವಾಸ ಮತ್ತು 11,60,000 ರೂ. ದಂಡವನ್ನು ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.
ಈ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪೆನ್ನೇಕರ್, ಎಸ್‌ಪಿ ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ಇನ್ಸ್ಪೆಕ್ಟರ್ ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿ ಹಲವು ಅಧಿಕಾರಿಗಳು, ಸಿಬ್ಬಂದಿಗೆ ನಗದು ಬಹುಮಾನ ಮಂಜುರಾಗಿದೆ.
ಸಮವಸ್ತ್ರದ ಆಚೆಗೂ ಮುಂದುವರಿಯುವ ಧ್ಯೇಯ: ಭಾರತೀಯ ಸೇನೆಯಿಂದ ಎಡಬ್ಲ್ಯೂಎಸ್ ವರೆಗೆ ಕುಮಾರ್ ವಿಕ್ರಮ್ ಸಿಂಗ್ ಅವರ ಪ್ರಯಾಣ
ಇನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬ್ಯಾಂಕ್ ಕಳವು ಪ್ರಕರಣದಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹಾಗೂ ಕಳುವಾದ ಮಾಲನ್ನು ಪತ್ತೆ ಹಚ್ಚಲು ಶ್ರಮಿಸಿದ ಜಿಲ್ಲೆಯ ಒಟ್ಟು 83 ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳಿಗೆ ನಗದು ಬಹುಮಾನ 10,02,500 ರೂ. ಗಳನ್ನು ಮಂಜೂರು ಮಾಡಲು ಪೊಲೀಸ್ ಮಹಾ ನಿರೀಕ್ಷಕರು, ಪೂರ್ವ ವಲಯ, ದಾವಣಗೆರೆ ರವರು ಶಿಫಾರಸ್ಸು ಮಾಡಿದ್ದರು. ಇದನ್ನು ಒಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಶ್ಲಾಘನೀಯ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಬಹುಮಾನ ಮಂಜೂರು ಮಾಡಲಾಗಿದೆ.