ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್

ಪೌರಕಾರ್ಮಿಕರ ವಿರುದ್ಧ ಜಾತಿನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ. ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಪೌರಕಾರ್ಮಿಕರ ವಿರುದ್ಧ ಜಾತಿನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಹರಿಹರ ಕ್ಷೇತ್ರದ ಬಿಜೆಪಿ (BJP) ಶಾಸಕ ಬಿ.ಪಿ. ಹರೀಶ್ (B.P Harish) ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ. ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಶಾಸಕ ಹರೀಶ್ ಗೆ ಬಂಧನ ಭೀತಿ ಎದುರಾಗಿದೆ.

ಶಾಸಕರು ಪದೇ ಪದೇ ಗೈರಾಗುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯವು ವಾರೆಂಟ್ ನೀಡಿದೆ. ಜನಪ್ರತಿನಿಧಿಯಾಗಿ ಕಾನೂನಿಗೆ ಗೌರವ ನೀಡಬೇಕಾದವರು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಮುಂದಿನ ವಿಚಾರಣೆಯ ವೇಳೆಗೆ ಅವರನ್ನು ನ್ಯಾಯಾಲಯಕ್ಕೆ ಕರೆತರುವಂತೆ ಆದೇಶಿಸಿದೆ.

ಏನಿದು ಘಟನೆ?

ಕಾಡಜ್ಜಿ ಕೆರೆಯ ಅಂಗಳದಲ್ಲಿ ವ್ಯವಸಾಯಕ್ಕೆಂದು ಟ್ರ್ಯಾಕ್ಟರ್ ಗೆ ಮಣ್ಣನ್ನು ತುಂಬಿಕೊಳ್ಳುತ್ತಿದ್ದಾಗ ಸ್ಥಳಕ್ಕೆ ಬಂದ ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಆಪ್ತ ಸಹಾಯಕ ಜಾತಿ ನಿಂದನೆ ಮಾಡಿದ್ದಾರೆ ಎಂದು ಕಾಡಜ್ಜಿ ಗ್ರಾಮದ ನಿವಾಸಿ, ಭೋವಿ ಸಮುದಾಯದ ಕಾಂತರಾಜ್ ಎಚ್. ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಶಾಸಕರ ಆಪ್ತ ಸಹಾಯಕನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

BJP MLA DN Jeevaraj: ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

"ನಾನು ಟ್ರ್ಯಾಕ್ಟರ್‌ನಿಂದ ಇಳಿದು ಕಾರಿನ ಬಳಿ ಹೋಗಿ ಶಾಸಕ ಹರೀಶ್ ಅವರನ್ನು ನೋಡಿದೆ. ನೀವು ನನ್ನ ಟ್ರ್ಯಾಕ್ಟರ್ ಅನ್ನು ಏಕೆ ತಡೆದಿದ್ದೀರಿ ಎಂದು ನಾನು ಕೇಳಿದಾಗ, ಶಾಸಕರು, ಅವರ ಮಗ ಮತ್ತು ಅವರ ಪಿಎ ಕಾರಿನಿಂದ ಇಳಿದು ನಾನು ಯಾವ ಆಧಾರದ ಮೇಲೆ ಮಣ್ಣು ತುಂಬುತ್ತೀದ್ದೀಯಾ ಎಂದು ಕೇಳಿದರು. ನಂತರ ಅವರು ನನ್ನನ್ನು ಅಸಭ್ಯವಾಗಿ ನಿಂದಿಸಿದರು ಎಂದು ದೂರುದಾರರು ಆರೋಪಿಸಿದ್ದರು.

Vishakha Bhat Heggar

View all posts by this author