ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Namma Metro: ರಾಜ್ಯಕ್ಕೆ ಶಾಕ್‌; ನಮ್ಮ ಮೆಟ್ರೋ ರೆಡ್‌ ಲೈನ್‌, ಡಬಲ್‌ ಡೆಕ್ಕರ್‌ ಫ್ಲೈಓವರ್‌ಗೆ ಕೇಂದ್ರ ಬ್ರೇಕ್‌

28,405 ಕೋಟಿ ರೂ. ಬೃಹತ್‌ ಮೊತ್ತದ ಡಿಪಿಆರ್ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೆಡ್‌ ಲೈನ್ ಯೋಜನೆಯನ್ನು ಮರುಪರಿಶೀಲನೆ ಮಾಡಲು ಸೂಚಿಸಲಾಗಿದ್ದು, ಅನುಮೋದನೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ. ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದರೆೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿರುವ ಕಾರಣ, ಅದಕ್ಕೂ ಆಯ್ದ ಜಂಕ್ಷನ್‌ಗಳಲ್ಲಿ ಮಾತ್ರ ಮಾಡಲು ಸೂಚಿಸಲಾಗಿದೆ.

ನಮ್ಮ ಮೆಟ್ರೋ ರೆಡ್‌ ಲೈನ್‌, ಡಬಲ್‌ ಡೆಕ್ಕರ್‌ಗೆ ಕೇಂದ್ರ ಬ್ರೇಕ್‌

ನಮ್ಮ ಮೆಟ್ರೋ ರೆಡ್‌ ಲೈನ್ -

ಹರೀಶ್‌ ಕೇರ
ಹರೀಶ್‌ ಕೇರ Feb 12, 2026 3:35 PM

ಬೆಂಗಳೂರು, ಫೆ.12: ನಮ್ಮ ಮೆಟ್ರೋ (Namma Metro) ದರ ಏರಿಕೆ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ (Central Government) ಬಿಗ್ ಶಾಕ್ ಕೊಟ್ಟಿದೆ. ಮೆಟ್ರೋ ರೆಡ್ ಲೈನ್‌ಗೆ (Metro Red line) ಹಾಗೂ ಡಬಲ್ ಡೆಕ್ಕರ್ (double decker) ಪ್ಲಾನ್‌ಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಹೀಗಾಗಿ ನಮ್ಮ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಂಸದ ಪಿ.ಸಿ ಮೋಹನ್ (P.C Mohan), ಸರ್ಜಾಪುರ – ಹೆಬ್ಬಾಳ ಮೆಟ್ರೋ ಕಾರಿಡಾರ್‌ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಯೋಜನೆ ಮತ್ತೆ ಮರುಪರಿಶೀಲನೆ ಮಾಡಲು ಸೂಚಿಸಲಾಗಿದೆ. 28,405 ಕೋಟಿ ರೂ. ಡಿಪಿಆರ್ ಹಿನ್ನೆಲೆ ಅನುಮೋದನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದರೆೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿದೆ. ಹಾಗಾಗಿ, ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಬೇಡ. ಆಯ್ದ ಜಂಕ್ಷನ್‌ಗಳಲ್ಲಿ ಡಬಲ್ ಡೆಕ್ಕರ್ ಮಾಡಬಹುದು ಎಂದು ಕೇಂದ್ರ ಸೂಚಿಸಿದೆ.

ರಾಜ್ಯ ಸರ್ಕಾರ ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲೂ ಡಬಲ್ ಡೆಕ್ಕರ್ ಫ್ಲೈ ಓವರ್ ಮಾಡಲು ಫ್ಲ್ಯಾನ್ ಮಾಡಿತ್ತು. ಈ ಹಿಂದೆ ಯೋಜನಾ ವೆಚ್ಚ ಹೆಚ್ಚಾಗಿದೆ ಎಂದು ಡಿಪಿಆರ್‌ನ್ನು ಕೇಂದ್ರ ಸರ್ಕಾರ ವಾಪಸ್ ಕಳಿಸಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಬ್ರೇಕ್‌ ಹಾಕಿದೆ.

Namma Metro Red Line: ಬೆಂಗಳೂರಿಗರಿಗೆ ಸಿಹಿ ಸುದ್ದಿ, ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಸಂಪುಟ ಅಸ್ತು

ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆಯ ಡಿಪಿಆರ್​​ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳನ್ನು ಈ ಮಾರ್ಗ ಹೊಂದಲಿದೆ. ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸಲಿದೆ ಎಂದು ಹೇಳಲಾಗಿತ್ತು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತಾದರೂ ಈಗ ಕೇಂದ್ರ ಸರ್ಕಾರ ಯೋಜನೆಯ ಡಿಪಿಆರ್​​ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

Namma Metro ticket Price hike: ನಮ್ಮ ಮೆಟ್ರೋ ‌ಟಿಕೆಟ್ ದರ ಏರಿಕೆಗೆ ಬಿಎಂಆರ್‌ಸಿಎಲ್‌ ಅಸ್ತು, ಬೆಂಗಳೂರಿಗರಿಗೆ ಇನ್ನೊಂದು ಬರೆ