Chamarajpet police station: ಚಾಮರಾಜಪೇಟೆ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ; 40 ಮಂದಿ ವಿರುದ್ಧ ಎಫ್‌ಐಆರ್‌

Chamarajpet police station: ಜ.14 ರಂದು ಐವರು ಯುವಕರ ಗುಂಪೊಂದು 21 ವರ್ಷದ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ, ವಾಹನವನ್ನು ಹಾನಿಗೊಳಿಸಿತ್ತು. ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರಿಂದ ಆರೋಪಿಗಳು, ಪೊಲೀಸ್‌ ಠಾಣೆಗೆ ಮುತ್ತಿಗೆ (Chamarajpet police station) ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಇದೀಗ ಎಫ್‌ಐಆರ್‌ ದಾಖಲಾಗಿದೆ.

Chamarajpet police station
Profile Prabhakara R January 19, 2025

ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಹಿಳೆಯರು ಸೇರಿ 40ಕ್ಕೂ ಹೆಚ್ಚು ಮಂದಿ ವಿರುದ್ಧ ಚಾಮರಾಜಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಜ.14 ರಂದು ಐವರು ಯುವಕರ ಗುಂಪೊಂದು 21 ವರ್ಷದ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ, ವಾಹನವನ್ನು ಹಾನಿಗೊಳಿಸಿತ್ತು. ಈ ಸಂಬಂಧ ನಯಮತ್ ಪಾಷಾ ಎಂಬುವವರು ದೂರು ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಬ್ ಇನ್‌ಸ್ಪೆಕ್ಟರ್ ತನಿಖೆ ನಡೆಸಿ, ಪಾಷಾ ಅವರನ್ನು ಟಿಪ್ಪುನಗರದ ಮಸೀದಿ ಬಳಿ ಕರೆದೊಯ್ದು ಪರಿಶೀಲನೆ ನಡೆಸಿದ್ದರು.

ಈ ವಿಚಾರ ತಿಳಿದ ಆರೋಪಿಗಳಾದ ಚಂದನ್, ಸಲೀಂ, ಮಸೂದ್, ಶಬ್ಬೀರ್ ಮಹಿಳೆಯರು ಸೇರಿ 40 ಮಂದಿಯನ್ನು ಠಾಣೆ ಮುಂದೆ ಜಮಾಯಿಸುವಂತೆ ಮಾಡಿ, ಪ್ರತಿಭಟನೆ ನಡೆಸಿದ್ದಾರೆ. ನಯಾಮತ್ ಅವರನ್ನು ಏಕೆ ಬಂಧಿಸಿಲ್ಲ? ಏಕೆ ಬಿಟ್ಟು ಕಳುಹಿಸಿದ್ದೀರಾ’ ಎಂದು ಗಲಾಟೆ ಮಾಡಿದ್ದಾರೆ. ಪೊಲೀಸರಿಗೆ ಏರುದನಿಯಲ್ಲಿ ಪ್ರಶ್ನಿಸಿದ್ದರು. ಎಷ್ಟೇ ಸಮಾಧಾನ ಮಾಡಿದರೂ ಕೇಳದೇ, ಪೊಲೀಸ್ ಸಿಬ್ಬಂದಿಯನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Viral Video: ಬೆಡ್‌ಶೀಟ್‌ ಕದ್ದು ಲಗೇಜ್ ಬ್ಯಾಗ್‌ನೊಳಗೆ ಬಚ್ಚಿಟ್ಟ ಖತರ್ನಾಕ್‌ ಪ್ರಯಾಣಿಕರು!

ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ.

ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 4ನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ. ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Viral Video: ಹಗಲು ಹೊತ್ತಿನಲ್ಲೇ ಬೈಕ್ ಕದ್ದ ಖದೀಮ! ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೊ ವೈರಲ್

ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Student dies 1

ಪಾವಗಡ: ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾದ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ (Heart Attack) ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕಾಲೇಜು ಮುಗಿಸಿ ಹೋಗುತ್ತಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಾವಗಡದಲ್ಲಿ ಶನಿವಾರ ನಡೆದಿದೆ.

ಮೈಥಿಲಿ ಮೃತ ವಿದ್ಯಾರ್ಥಿನಿ. ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ, ಶನಿವಾರ ತರಗತಿ ಮುಗಿಸಿ ಪಟ್ಟಣದ ಬಸ್‌ ನಿಲ್ದಾಣದ ಕಡೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಸುಸ್ತಾಗಿ ಕೆಳಗೆ ಬಿದ್ದಿದ್ದಾಳೆ. ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ.

ಸಾರ್ವಜನಿಕ ಆಸ್ಪತ್ರೆಯ ಬಳಿ ವಿದ್ಯಾರ್ಥಿನಿಯ ಸ್ನೇಹಿತರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ