ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತುಮಕೂರು – ಬೆಂಗಳೂರು ಹೈವೇಯಲ್ಲಿ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿ; ಕ್ಲೋರೈಡ್ ಸೋರಿಕೆ

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಲುವನಹಳ್ಳಿ ಗ್ರಾಮದ ಬಳಿ ಕ್ಲೋರೈಡ್ ಕೆಮಿಕಲ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆಮಿಕಲ್ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ (Tumakuru-Bengaluru highway) ಹೆದ್ದಾರಿಯ ಕುಲುವನಹಳ್ಳಿ ಗ್ರಾಮದ ಬಳಿ ಕ್ಲೋರೈಡ್ ಕೆಮಿಕಲ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆಮಿಕಲ್ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನೂ ಅಪಾಯಕಾರಿ ಕ್ಲೋರೈಡ್ ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಲಾರಿ ತೆರವಿಗೆ ಕಾರ್ಯಚರಣೆ ಆರಂಭಿಸಿದ್ದಾರೆ.

ಅಪಘಾತದಲ್ಲಿ ತಂದೆ - ಮಗಳು ಸಾವು

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ಕ್ರಾಸ್ ಬಳಿ ಮಂಗಳವಾರ ಲಾರಿಯೊಂದು ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುದ್ದೇಬಿಹಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಟ್ರ್ಯಾಕ್ಟರ್ ಅನ್ನು ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವತಿಗೆ ನೆರವಾದ ಚಿರಾಗ್ ಪಾಸ್ವಾನ್; ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹಾಗೂ ಮೃತರ ದೇಹಗಳನ್ನು ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishakha Bhat Heggar

View all posts by this author