ಕಷ್ಟಗಳನ್ನು ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ, ಆದರ್ಶ ಗೃಹಿಣಿ ಚೆನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ
ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
-
ಬೆಂಗಳೂರು: ಚೆನ್ನಮ್ಮ ದೇವೇಗೌಡ (Chennamma) ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಚೆನ್ನಮ್ಮ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು.
ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ - ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು.
ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು.
ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ತಿಳಿಸಿದ್ದಾರೆ.
ಚೆನ್ನಮ್ಮ ನಿಧನ ತೀವ್ರ ನೋವನ್ನುಂಟು ಮಾಡಿದೆ: ವಿಜಯೇಂದ್ರ
ಚೆನ್ನಮ್ಮ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಸನ್ಮಾನ್ಯ ಶ್ರೀ ಎಚ್. ಡಿ ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ವಿಧಿವಶರಾಗಿರುವುದು ತೀವ್ರ ನೋವನ್ನುಂಟು ಮಾಡಿದೆ. ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಾರೆ ಎನ್ನುತ್ತಿರುವಾಗಲೇ ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.
Chennamma Death: ಅಜ್ಜಿ ಚೆನ್ನಮ್ಮ ನಮ್ಮ ಮನೆಯ ಆಧಾರಸ್ತಂಭವಾಗಿದ್ರು: ನಿಖಿಲ್ ಕಂಬನಿ
ಮಾಜಿ ಪ್ರಧಾನಿ ದೇವೇಗೌಡರ ಜೀವನ ಸಂಗಾತಿಯಾಗಿ ಅವರ ಜೀವನದುದ್ದಕ್ಕೂ ಜತೆಗೆ ನಿಂತು ಅವರ ಏಳಿಗೆಗೆ ಎಲೆಮರೆ ಕಾಯಿಯಂತೆ ಇದ್ದವರು. 85 ವರ್ಷಗಳ ಸಾರ್ಥಕ ಬದುಕನ್ನು ನಡೆಸಿದ ಮಾತೃ ಸ್ವರೂಪಿ ಚೆನ್ನಮ್ಮನವರು ನಮ್ಮನೆಲ್ಲ ಅಗಲಿರುವುದು ತುಂಬಾ ನೋವಿನ ಸಂಗತಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಂಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾಥಿಸುತ್ತೇನೆ ಎಂದು ತಿಳಿಸಿದ್ದಾರೆ.