ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹವೂ ಅಪರಾಧ; ಮಹತ್ವದ ಆದೇಶ ನೀಡಿದ ಹೈಕೋರ್ಟ್‌

ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ ಫೋನ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್‌ ಎಂಬಾತ ಪ್ರಕರಣದ ಕುರಿತು ಅರ್ಜಿ ಸಲ್ಲಿಸಿದ್ದ.

ಮಕ್ಕಳ ಅಶ್ಲೀಲ ಚಿತ್ರ,  ವಿಡಿಯೋ ಸಂಗ್ರಹವೂ ಅಪರಾಧ; ಹೈಕೋರ್ಟ್‌

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 12, 2026 8:04 AM

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ ಫೋನ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಲೈಂಗಿಕ (POSCO Case) ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಮೊಬೈಲ್‌ನಲ್ಲಿ ಹೇರಳವಾಗಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ ಕಾಯಿದೆ-2012ರ ಸೆಕ್ಷನ್‌ 15 ಮತ್ತ ಐಟಿ ಕಾಯಿದೆ-2000ರ ಸೆಕ್ಷನ್‌ 67(ಬಿ) ಅಡಿಯಲ್ಲಿದಾಖಲಾಗಿರುವ ಎಫ್‌ಐಆರ್‌ ರದ್ದತಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.

ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್‌ ಎಂಬಾತ ಪ್ರಕರಣದ ಕುರಿತು ಅರ್ಜಿ ಸಲ್ಲಿಸಿದ್ದ. ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳು ಮೊಬೈಲ್‌ ಫೋನ್‌ನಲ್ಲಿ ಸಂಗ್ರಹಿಸಲಾಗಿದೆಯಷ್ಟೆ. ಆದರೆ, ಅದನ್ನು ಯಾರಿಗೂ ಕಳುಹಿಸಿಲ್ಲ. ಹಾಗಾಗಿ, ಪೋಕ್ಸೊ ಮತ್ತು ಐಟಿ ಕಾಯಿದೆಯಡಿ ಅಪರಾಧಗಳು ನನಗೆ ಅನ್ವಯವಾಗುವುದಿಲ್ಲ, ಎಂಬ ಅರ್ಜಿದಾರನ ವಾದವನ್ನು ಪೀಠ ತಿರಸ್ಕರಿಸಿದೆ.

'ಮಕ್ಕಳ ಅಶ್ಲೀಲ ಚಿತ್ರ ಹಾಗೂ ವಿಡಿಯೊಗಳನ್ನು ಪ್ರಸರಣ ಮಾಡುವುದಷ್ಟೇ ಅಲ್ಲ. ಪ್ರಸಾರವಾಗುವ ಸಾಮರ್ಥ್ಯವನ್ನು ಹೊಂದಿರುವ ಮಕ್ಕಳ ಅಶ್ಲೀಲ ಪೋಟೊ ಹಾಗೂ ವಿಡಿಯೊವನ್ನು ಸಂಗ್ರಹಿಸಿಡುವುದು ಕೂಧಿಡ ಪೋಕ್ಸೊ ಕಾಯಿದೆಯ ಸೆಕ್ಷನ್‌ 15ರಡಿ ಅಪರಾಧವಾಗುತ್ತದೆ. ಈ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಅರ್ಜಿದಾರರು ತಮ್ಮ ಫೋನ್‌ನಿಂದ ಮಕ್ಕಳ ಅಶ್ಲೀಲ ಚಿತ್ರ ಮತ್ತು ಪೋಟೊ ರವಾನಿಸಿಲ್ಲ ಎಂಬ ಕಾರಣಕ್ಕಾಗಿ ಅವರು ಅಪರಾಧಕ್ಕೆ ಹೊಣೆಗಾರರಾಗಿರುವುದಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.

POCSO case: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಜೀವನಪೂರ್ತಿ ಜೈಲು ಶಿಕ್ಷೆ

ಏನಿದು ಪ್ರಕರಣ?

ಕ್ರಿಮಿನಲ್‌ ಕೇಸ್‌ ಒಂದರಲ್ಲಿ ಸಿಲುಕಿಕೊಂಡ ಅರ್ಜಿದಾರರ ಮೊಬೈಲ್‌ ಫೋನ್‌ ಅನ್ನು ಪೊಲೀಸರು ತನಿಖೆ ವೇಳೆ ವಶಕ್ಕೆ ಪಡೆದಿದ್ದರು. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಮೊಬೈಲ್‌ ಸ್ಟೋರೇಜ್‌ ಬಾಕ್ಸ್‌ನಲ್ಲಿಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳು ಪತ್ತೆಯಾಗಿತ್ತು. ಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಪೊಲೀಸರು, ಅರ್ಜಿದಾರನ ವಿರುದ್ಧ ಐಟಿ ಕಾಯಿದೆ ಸೆಕ್ಷನ್‌ 67 (ಬಿ) ಮತ್ತು ಪೋಕ್ಸೊ ಕಾಯಿದೆ ಸೆಕ್ಷನ್‌ 15ರ ಅನ್ವಯ ಮಕ್ಕಳ ಅಶ್ಲೀಲ ಚಿತ್ರಗಳ ರಚನೆ, ಬ್ರೌಸಿಂಗ್‌, ಸಂಗ್ರಹ ಮತ್ತು ಪ್ರಸರಣ ಶಿಕ್ಷಾರ್ಹ ಅಪರಾಧ ಎಂಬ ಅಂಶಗಳ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ವಿಚಾರಣೆ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್‌ನ ಮೊರೆ ಹೋಗಿದ್ದರು.