ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂಗೆ ಹೈಟೆಕ್‌ ಟಚ್‌; ಆಸನ ಸಾಮರ್ಥ್ಯ 55,000ಕ್ಕೆ ಹೆಚ್ಚಳ

ಚಿನ್ನಸ್ವಾಮಿ ಕ್ರೀಡಾಂಗಣದ ನವೀಕರಣ ಕುರಿತು ಪ್ರತಿಕ್ರಿಯಿಸಿರುವ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಅವರು, ಪ್ರಸ್ತುತ ಕ್ರೀಡಾಂಗಣದಲ್ಲಿ 33 ಸಾವಿರ ಆಸನಗಳಿದ್ದರೂ, ಸುಮಾರು 26 ಸಾವಿರ ಪ್ರೇಕ್ಷಕರು ಮಾತ್ರ ಕುಳಿತುಕೊಳ್ಳಲು ಸಾಧ್ಯವಾಗುತ್ತಿದೆ. ಇದನ್ನು 55 ಸಾವಿರದಿಂದ 60 ಸಾವಿರ ಆಸನಗಳ ಸಾಮರ್ಥ್ಯಕ್ಕೆ ಹೆಚ್ಚಿಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಹೇಳಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಆಸನ ಸಾಮರ್ಥ್ಯ 55 ಸಾವಿರಕ್ಕೆ ಹೆಚ್ಚಳ

ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌. -

Prabhakara R
Prabhakara R May 22, 2026 9:29 PM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣವನ್ನು (Chinnaswamy Stadium) ಮತ್ತಷ್ಟು ಹೈಟೆಕ್ ಮಾಡಲು ಯೋಜನೆ ರೂಪಿಸಲಾಗಿದೆ. ಆಸನ ಸಾಮರ್ಥ್ಯ ಹೆಚ್ಚಳ, ಎಲ್‌ಇಡಿ ದೀಪ ಅಳವಡಿಕೆ ಸೇರಿ ವಿವಿಧ ಆಧುನಿಕ ಸೌಲಭ್ಯ ತೀರ್ಮಾನಿಸಲಾಗಿದೆ. ಇದೇ ರೀತಿ ಮೈಸೂರು ಹಾಗೂ ಹುಬ್ಬಳ್ಳಿ ಕ್ರೀಡಾಂಗಣಗಳಲ್ಲೂ ಎಲ್‌ಇಡಿ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ನವೀಕರಣ ಕುರಿತು ಪ್ರತಿಕ್ರಿಯಿಸಿರುವ ಅವರು, ಪ್ರಸ್ತುತ ಕ್ರೀಡಾಂಗಣದಲ್ಲಿ 33 ಸಾವಿರ ಆಸನಗಳಿದ್ದರೂ, ಸುಮಾರು 26 ಸಾವಿರ ಪ್ರೇಕ್ಷಕರು ಮಾತ್ರ ಕುಳಿತುಕೊಳ್ಳಲು ಸಾಧ್ಯವಾಗುತ್ತಿದೆ. ಇದನ್ನು 55 ಸಾವಿರದಿಂದ 60 ಸಾವಿರ ಆಸನಗಳ ಸಾಮರ್ಥ್ಯಕ್ಕೆ ಹೆಚ್ಚಿಸಲು ಯೋಜನೆ ಸಿದ್ಧವಾಗುತ್ತಿದೆ. ಇದಕ್ಕಾಗಿ ವಿಶ್ವದ ವಿವಿಧ ಭಾಗಗಳಿಂದ 28 ಆರ್ಕಿಟೆಕ್ಚರ್ ಸಂಸ್ಥೆಗಳು ಮುಂದೆ ಬಂದಿದ್ದು, ಅತ್ಯುತ್ತಮ ಸಂಸ್ಥೆಗಳೊಂದಿಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಕ್ರೀಡಾಂಗಣವನ್ನು ಮೂರು ಹಂತದ ಗ್ಯಾಲರಿಯಾಗಿ ಅಭಿವೃದ್ಧಿಪಡಿಸಿ, 360 ಡಿಗ್ರಿ ವೀವ್ ವ್ಯವಸ್ಥೆ ಕಲ್ಪಿಸುವ ಯೋಜನೆಯಿದೆ. ಜತೆಗೆ ಕಾಮೆಂಟ್ರಿ ಬಾಕ್ಸ್, ಮೀಡಿಯಾ ಗ್ಯಾಲರಿ ಸೇರಿ ಎಲ್ಲಾ ಒಳಾಂಗಣ ವ್ಯವಸ್ಥೆಗಳಿಗೆ ಹೈಟೆಕ್ ಟಚ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

IPL 2026: ʻಎಂಎಸ್‌ ಧೋನಿ ಹೆಸರಿನಲ್ಲಿ ಫ್ಯಾನ್ಸ್‌ಗೆ ಮೋಸʼ-ಸಿಎಸ್‌ಕೆ ಎದುರು ಕೆ ಶ್ರೀಕಾಂತ್‌ ಆಕ್ರೋಶ!

ಬೆಂಗಳೂರಿನ ನೂತನ ಕ್ರಿಕೆಟ್‌ ಸ್ಟೇಡಿಯಂಗೆ ಮೇ 23ಕ್ಕೆ ಶಂಕುಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 23) ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಸೂರ್ಯನಗರ 4ನೇ ಹಂತದ ಕೆಎಚ್‌ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ (Bengaluru’s New Cricket Stadium) ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜತೆಗೆ ಸಿಎಂ ಅವರು, ನಮ್ಮ ಮನೆ ಯೋಜನೆಗೆ ಚಾಲನೆ, ಸೂರ್ಯ ಶೈನ್‌ ಮತ್ತು ಸೂರ್ಯ ಡಿವೈನ್‌ ವಸತಿ ಸಮುಚ್ಛಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರುಗಳಿಗೆ ಸಾಂಕೇತಿಕ ನಿವೇಶನ ಹಂಚಿಕೆ, ಸಾರ್ವಜನಿಕ ಅರ್ಜಿದಾರರಿಗೆ ನಿವೇಶನ ಹಂಚಿಕೆ ಮಾಡಲಿದ್ದಾರೆ.

ಶನಿವಾರ ಬೆಳಗ್ಗೆ ಇಂಡ್ಲವಾಡಿಯ ಕೆ.ಎಚ್.ಬಿ. ಸೂರ್ಯ ಕ್ರೀಡಾ ಗ್ರಾಮದಲ್ಲಿ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾ‌ರ್, ವಸತಿ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹಾಗೂ ಆನೇಕಲ್ ಶಾಸಕ ಬಿ. ಶಿವಣ್ಣ ಮತ್ತಿತರ ಗಣ್ಯರು ಉಪಸ್ಥಿತರಿರಲಿದ್ದಾರೆ.

ನೂತನ ಕ್ರಿಕೆಟ್‌ ಸ್ಟೇಡಿಯಂ ವಿಶೇಷತೆಗಳೇನು?

  • 943 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ
  • 80,000 ಆಸನ ಸಾಮರ್ಥ್ಯದ ಅಂತಾರಾಷ್ಟ್ರೀಯ ಸ್ಟೇಡಿಯಂ
  • ಭಾರತದ 2ನೇ ಅತಿದೊಡ್ಡ ಕ್ರೀಡಾಂಗಣ
  • ಮೆಟ್ರೋ ಸಂಪರ್ಕದೊಂದಿಗೆ ವಿಶ್ವಮಟ್ಟದ ಸೌಲಭ್ಯ
  • ಚಿನ್ನಸ್ವಾಮಿ ಕ್ರೀಡಾಂಗಣಕ್ಕಿಂತ ಎರಡು ಪಟ್ಟು ದೊಡ್ಡದು

ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಅನ್ನು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರ 4ನೇ ಹಂತದಲ್ಲಿ (ಇಂಡ್ಲವಾಡಿ ಗ್ರಾಮ) ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ‘ಕೆಎಚ್‍ಬಿ ಸೂರ್ಯ ಕ್ರೀಡಾ ಗ್ರಾಮ’ ಯೋಜನೆಯಡಿ ನಿರ್ಮಿಸಲಾಗುತ್ತಿದೆ.