Choo Mantar Movie: ಶರಣ್ ಅಭಿನಯದ ‘ಛೂ ಮಂತರ್’ ಚಿತ್ರದ ಪ್ರೀ ರಿಲೀಸ್ ಇವೆಂಟ್; ಜ.10ಕ್ಕೆ ಸಿನಿಮಾ ರಿಲೀಸ್‌

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ʼಕರ್ವʼ‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರದ (Choo Mantar Movie) ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಈ ಕುರಿತ ವಿವರ ಇಲ್ಲಿದೆ.

image-b3f5d176-2a07-4d26-9c91-42ae4f93af97.jpg
Profile Vishwavani News January 8, 2025
ಬೆಂಗಳೂರು: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ʼಕರ್ವʼ‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ (Sharan) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರದ (Choo Mantar Movie) ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನಸಿನ ರಾಣಿ ಮಾಲಾಶ್ರೀ, ಡಾಲಿ ಧನಂಜಯ, ಗುರುಕಿರಣ್, ರಿಷಿ, ಪ್ರಥಮ್, ಅಮೂಲ್ಯ, ಧೀರೇನ್ ರಾಮಕುಮಾರ್, ತಿಲಕ್, ಮಾಲಾಶ್ರೀ ಪುತ್ರಿ ಆರಾಧನಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಚಿಂಗಾರಿ ಮಹದೇವ್, ನಿರ್ಮಾಪಕ ಕಿರಣ್ ಬರ್ತೂರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ʼಛೂ ಮಂತರ್ʼ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
image-c97feb09-22c6-4975-99c2-3d71d8610c62.jpg
ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಆಗಮಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ಮಾಪಕ ತರುಣ್ ಶಿವಪ್ಪ, ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಇದೇ ಸಮಯದಲ್ಲಿ ಬೇರೆ ಭಾಷೆಗಳ ಚಿತ್ರಗಳು ಬಿಡುಗಡೆಯಾಗಲಿದೆ. ಹಾಗಾಗಿ ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುತ್ತಿಲ್ಲ. ಮಂಡ್ಯದಂತಹ ಕನ್ನಡಿಗರೇ ಹೆಚ್ಚಿರುವ ಊರಿನಲ್ಲೂ ಚಿತ್ರಮಂದಿರ ಸಿಗದಿರುವುದು ತುಂಬಾ ಬೇಸರವಾಗಿದೆ. ಈ ಕುರಿತು ನಾವು ವಾಣಿಜ್ಯ ಮಂಡಳಿ ಮೊರೆ ಹೋಗಿದ್ದು, ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುವ ಭರವಸೆ ಇದೆ ಎಂದರು.
ಚಿತ್ರತಂಡದ ಸಹಕಾರದಿಂದ ʼಛೂಮಂತರ್ʼ ಚೆನ್ನಾಗಿ ಮೂಡಿಬಂದಿದೆ ಎಂದು ನಿರ್ದೇಶಕ ನವನೀತ್ ತಿಳಿಸಿದರು.
image-04baf2f2-5633-4777-bd70-685f9c9515d7.jpg
ಈ ಚಿತ್ರದಲ್ಲಿ ನಾನೊಬ್ಬನೇ ನಾಯಕನಲ್ಲ. ಇದರಲ್ಲಿ ಅಭಿನಯಿಸಿರುವ ಎಲ್ಲರೂ ನಾಯಕರೆ. ಒಟ್ಟಾರೆ ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ಎಲ್ಲರ ಮನ ತಲುಪಿದೆ. ಚಿತ್ರ ಗೆಲ್ಲುವ ಭರವಸೆ ಇದೆ. ಇಂದು ನಮ್ಮ‌ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಇಷ್ಟು ಜನ ಕಲಾವಿದರು ಬಂದಿರುವುದು ತುಂಬಾ ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ ಎಂದರು ನಾಯಕ ಶರಣ್.
ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅವಿನಾಶ್ ಬಸತ್ಕೂರ್ ಸೇರಿದಂತೆ ಅನೇಕ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | Winter Mix Match Fashion 2025: ಬದಲಾಗಿದೆ 2025ರ ಚಳಿಗಾಲದ ಮಿಕ್ಸ್ ಮ್ಯಾಚ್ ಫ್ಯಾಷನ್
ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ ʼಛೂ ಮಂತರ್ʼ ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ