ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬನ್ನೇರುಘಟ್ಟದಲ್ಲಿ ಕ್ರೈಸ್ತ ಸಂಪ್ರದಾಯದಂತೆ ನೆರವೇರಿದ ಸಿ.ಜೆ.ರಾಯ್ ಅಂತ್ಯಕ್ರಿಯೆ

CJ Roy's Funeral: ಉದ್ಯಮಿ ಸಿ.ಜೆ. ರಾಯ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಂಬಂಧಿಕರು, ಆಪ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ನೂರಾರು ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಿ.ಜೆ.ರಾಯ್‌ ಅಂತ್ಯಕ್ರಿಯೆ ನೆರವೇರಿತು.

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್ ಅವರ ಅಂತ್ಯ ಸಂಸ್ಕಾರವು (CJ Roy's Funeral) ನಗರದ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ಭಾನುವಾರ ಸಂಜೆ ನೆರವೇರಿತು. ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಿದ ಬಳಿಕ, ಕಾಸಾಗ್ರ್ಯಾಂಡ್‌ನಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ರಾಯ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಂಬಂಧಿಕರು, ಆಪ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ನೂರಾರು ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

CJ Roy  (4)

ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಬನ್ನೇರುಘಟ್ಟಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ಸಂಸ್ಕಾರ ಮಾಡಲಾಗಿದೆ.

_CJ Roy's Funeral  (1)

CJ Roy Death Case: ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಕಚೇರಿಯಲ್ಲಿ ಜನವರಿ 30ರಂದು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿತ್ತು.

ರಾಯ್‌ ಆತ್ಮಹತ್ಯೆ ತನಿಖೆಗಾಗಿ ಎಸ್‌ಐಟಿ ರಚನೆ

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಲು ಈಗಾಗಲೇ ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಬೆಂಗಳೂರು ನಗರದ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನಿಯೋಜಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಉಪವಿಭಾಗದ ಎಸಿಪಿ ಸುಧೀರ್, ಸಿಸಿಆರ್ ಬಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್​​ಪೆಕ್ಟರ್​ ಕೆ.ಬಿ.ರವಿ ಅವರು ತಂಡದಲ್ಲಿ ಇದ್ದಾರೆ.