ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada Pustaka Habba: ಡಿ.7ರಂದು ರಾಷ್ಟ್ರೋತ್ಥಾನ ಸಾಹಿತ್ಯದ 5ನೇ ಕನ್ನಡ ಪುಸ್ತಕ ಹಬ್ಬದ ಸಮಾರೋಪ

Rashtrotthana Sahitya: ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದ ಸಮಾರೋಪ ಸಮಾರಂಭ ಡಿ.7ರಂದು ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಶಿಕ್ಷಣ ತಜ್ಞ, ಲೇಖಕ ಡಾ. ಗುರುರಾಜ ಕರಜಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರಾಷ್ಟ್ರೋತ್ಥಾನ ಸಾಹಿತ್ಯದ 5ನೇ ಕನ್ನಡ ಪುಸ್ತಕ ಹಬ್ಬ

ಬೆಂಗಳೂರು, ಡಿ.4: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ (Rashtrotthana Sahitya) ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬ (Kannada Pustaka Habba) ಡಿ.7ರಂದು ಭಾನುವಾರ ಮುಕ್ತಾಯವಾಗಲಿದೆ. 5ನೇ ಬಾರಿಗೆ ರಾಷ್ಟ್ರೋತ್ಥಾನ ಸಾಹಿತ್ಯವು ಆಯೋಜಿಸಿದ್ದ ಕನ್ನಡ ಪುಸ್ತಕ ಹಬ್ಬಕ್ಕೆ ಸಾಹಿತ್ಯಾಸಕ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿ.7ರಂದು ಸಂಜೆ 5 ಗಂಟೆಗೆ 5ನೇ ಕನ್ನಡ ಪುಸ್ತಕ ಹಬ್ಬದ ಸಮಾರೋಪ ಸಮಾರಂಭ ನಡೆಯಲಿದೆ.

ಶಿಕ್ಷಣ ತಜ್ಞ, ಲೇಖಕ ಡಾ. ಗುರುರಾಜ ಕರಜಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ಬಸವರಾಜ ಪಾಟೀಲ ಸೇಡಂ ಗೌರವ ಉಪಸ್ಥಿತರಿರಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಕನ್ನಡ ಪುಸ್ತಕ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವುದು.

ಶ್ರೀ ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ

ಅಂದು ಬೆಳಗ್ಗೆ 10.30ಕ್ಕೆ ಶತಮಾನದ ಸಂತ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ಘೋಡಗೇರಿಯ ಶ್ರೀ ಶಿವಾನಂದ ಮಠದ ಶ್ರೀ ಮಲ್ಲಯ್ಯ ಸ್ವಾಮೀಜಿ ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಕುರಿತು ಮಾತನಾಡಲಿದ್ದಾರೆ. ಖ್ಯಾತ ಗಾಯಕ ಶಂಕರ್‌ ಶಾನುಭಾಗ್‌, ವಚನಗಳ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ನವೆಂಬರ್‌ 1 ರಿಂದ ಆರಂಭವಾದ ಕನ್ನಡ ಪುಸ್ತಕ ಹಬ್ಬದಲ್ಲಿ ಪುಸ್ತಕ ಪ್ರದರ್ಶನ-ಮಾರಾಟ ಮಾತ್ರವಲ್ಲ ಪ್ರತಿದಿನವೂ ಸಂಜೆ ಸಂಸ್ಕಾರ ಭಾರತಿ ಸಹಯೋಗದೊಂದಿಗೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದ್ದವು. ನಾಡಿನ ಖ್ಯಾತ ಕಲಾವಿದರು 5ನೇ ಕನ್ನಡ ಪುಸ್ತಕ ಹಬ್ಬದ ಸಾಹಿತ್ಯ-ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಿ ಜನರನ್ನು ರಂಜಿಸಿದ್ದರು. ಈ ಬಾರಿ ಕನ್ನಡ ಪುಸ್ತಕ ಹಬ್ಬದ ಭಾಗವಾಗಿ 50ಕ್ಕೂ ಹೆಚ್ಚು ವಿವಿಧ ಪ್ರಕಾರದ ಸಾಂಸ್ಕೃತಿಕ ಕಾರ್ಯಕ್ರಮಗಳು, 10 ಪುಸ್ತಕಗಳ ಲೋಕಾರ್ಪಣೆ, 3 ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆದಿವೆ. ಜತೆಗೆ ಅನಕೃ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಈ ವೇದಿಕೆ ಸಾಕ್ಷಿಯಾಗಿತ್ತು.

ಹೈಪರ್ ಸ್ಪೋರ್ಟ್ಸ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್

37 ದಿನಗಳ ಕಾಲ ನಡೆದ ಕನ್ನಡ ಪುಸ್ತಕ ಹಬ್ಬಕ್ಕೆ ಬೆಂಗಳೂರು ಮಾತ್ರವಲ್ಲದೇ ನಾಡಿನ ವಿವಿಧ ಭಾಗಗಳಿಂದ ಸಾಕಷ್ಟು ಓದುಗರು ಭೇಟಿ ನೀಡಿ, ಪುಸ್ತಕ ಖರೀದಿಸಿದ್ದರು.