ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಕ್ರಮ ಬಂದೂಕುಗಳ ವಾಪಸಾತಿಗೆ ಗಡುವು: ನ.1ರೊಳಗೆ ಒಪ್ಪಿಸಲು ಸಿಎಂ ಸೂಚನೆ

ಬಂದೂಕುಗಳ ನಿಯಂತ್ರಣ ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರು ತಮ್ಮ ಬಳಿಯಿರುವ ಪರವಾನಗಿ ರಹಿತ ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಒಪ್ಪಿಸಬೇಕು. ಇಲ್ಲ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನ.1ರೊಳಗೆ ಅಕ್ರಮ ಬಂದೂಕುಗಳ ವಾಪಸಾತಿಗೆ ಗಡುವು

-

Profile
Ashok Nayak Sep 12, 2026 9:28 AM

ಬೆಂಗಳೂರು: ಬಂದೂಕುಗಳ ನಿಯಂತ್ರಣ ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರು ತಮ್ಮ ಬಳಿಯಿರುವ ಪರವಾನಗಿ ರಹಿತ ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಒಪ್ಪಿಸಬೇಕು. ಇಲ್ಲ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖ ಲಿಸುವುದಿಲ್ಲ.

ಇದನ್ನೂ ಓದಿ: Bangalore News: ಕಾನೂನು ಬಾಹಿರವಾಗಿ ಮದರಸಾಗೆ ನೀಡಿರುವ ಐದು ಲಕ್ಷ ರೂ. ಅನುದಾನ ವಾಪಸ್ ಪಡೆಯುವಂತೆ ಎರಡನೇ ಬಾರಿಗೆ ಹೈ ಕೋರ್ಟ್ ಆದೇಶ

ನೀವು ನಿಮ್ಮ ಹಾಗೂ ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ ಎಂದು ಸಂದೇಶ ನೀಡಿದರು. ಅನಧಿಕೃತ ಬಂದೂಕುಗಳನ್ನು ಒಪ್ಪಿಸಲು ನವೆಂಬರ್ 1ರವರೆಗೆ ಸಮಯಾವಕಾಶವಿದೆ. ಅರಣ್ಯ ಪ್ರದೇಶಗಳ ಸಮೀಪ ವಾಸಿಸುವ ಜನರಿಗೆ ತಮ್ಮ ಪರವಾನಗಿ ರಹಿತ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಅವಕಾಶ ನೀಡಲು ಸರಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಅರಣ್ಯಕ್ಕೂ ನನಗೂ ಬಹಳ ಹತ್ತಿರದ ಸಂಬಂಧ. ನನ್ನ ಊರು, ಮನೆ, ಕ್ಷೇತ್ರ ಬದುಕು ಎಲ್ಲವೂ ಅರಣ್ಯಕ್ಕೆ ಹೊಂದಿಕೊಂಡೇ ಇದೆ. ಅರ್ಕಾವತಿಯಲ್ಲಿ ಮಹಶೀರ್ ಮೀನು ಗಳಿದ್ದವು ನಾನೂ ಸಹ ಮೀನಿಗೆ ಗಾಳ ಹಾಕಿ ಕುಳಿತುಕೊಳ್ಳುತ್ತಿದ್ದೆ. ಈ ಕಾರಣಕ್ಕೆ ನನಗೂ ಅರಣ್ಯ ಮಂತ್ರಿ ಆಗುವ ಆಸೆ ಯಿತ್ತು. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಅವಕಾಶ ಕೇಳಿದ್ದೆ. ಆದರೆ ಅವರು ಕೃಷಿ ಸಚಿವ ನನ್ನಾಗಿ ಮಾಡಿದರು. -ಡಿ.ಕೆ.ಶಿವಕುಮಾರ್, ಮುಖ್ಯಮಂತಿ