ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನದ ಅಂಗವಾಗಿ ಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ನಗರದ ಸದಾಶಿವನಗರ ನಿವಾಸದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೇ ಆರೋಗ್ಯ ಸಚಿವ ಯು.ಟಿ.ಖಾದರ್ (UT Khader) ಅವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವರಾದ ಯು.ಟಿ. ಖಾದರ್ ಅವರೊಂದಿಗೆ ಚಾಲನೆ ನೀಡಿದ್ದೇನೆ.

ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದೆ. ಹಾಗಾಗಿ, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ. 'ಎರಡು ಹನಿ ಜೀವ ರಕ್ಷಕ' ಎಂಬುದನ್ನು ಮನದಟ್ಟು ಮಾಡಿಕೊಂಡು, ಪೋಲಿಯೋ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೈಜೋಡಿಸೋಣ ಎಂದು ಸಿಎಂ ಕರೆ ನೀಡಿದರು.

Hebbal Tunnel Road: ಟೋಲ್ ಮುಕ್ತ ಹೆಬ್ಬಾಳ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ; ಏನಿದರ ಅನುಕೂಲ?
ಆರೋಗ್ಯ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯಿಸಿ, ಪೊಲಿಯೋ ರಹಿತ ಸಮಾಜ ನಿರ್ಮಾಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿಸುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.