ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Police Commissioner: ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿಯಾದ ಸಿಎಂ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ (Bengaluru Police Commissioner) ಬಿ.ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿಯಾದ ಸಿಎಂ

Profile Vishakha Bhat Jun 6, 2025 12:29 PM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ (Bengaluru Police Commissioner) ಬಿ.ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ದಯಾನಂದ್‌ ಅವರ ಜಾಗಕ್ಕೆ ನೂತನ ಕಮೀಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಲಾಗಿದೆ. ಇದೀಗ ನೂತನ ಕಮೀಷನರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಶುಕ್ರವಾರ ಬೆಳಿಗ್ಗೆ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಹೂಗುಚ್ಛ ನೀಡಿ ಅವರನ್ನು ಅಭಿನಂದಿಸಿದರು. ಜಾರ್ಖಂಡ್‌ ಮೂಲದ ಸೀಮಂತ್‌ ಕುಮಾರ್‌ ಸಿಂಗ್‌ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ

ಬಿ ದಯಾನಂದ್‌ ಅವರ ಅಮಾನತಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಐ ಸ್ಟ್ಯಾಂಡ್‌ ವಿಥ್‌ ದಯಾನಂದ್‌ ಎಂಬ ಅಭಿಯಾನ ಶುರುವಾಗಿದೆ. ಸರ್ಕಾರದ ವೈಫಲ್ಯಕ್ಕೆ ಪೊಲೀಸರನ್ನು ಸುಖಾ ಸುಮ್ಮನೆ ಹೊಣೆಯಾಗಿಸಲಾಗುತ್ತಿದೆ ಎಂದು ಅನೇಕರು ಕಿಡಿ ಕಾರಿದ್ದಾರೆ. ಮತ್ತೊಂದೆಡೆ ನಿವೃತ ಪೊಲೀಸ್‌ ಅಧಿಕಾರಿಗಳು ಕೂಡ ಸರ್ಕಾರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕ್ರಮದ ವಿರುದ್ದ ನಿವೃತ್ತ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಜ್ಯೋತಿ ಪ್ರಕಾಶ್ ಮಿರ್ಜಿ, ಸರ್ಕಾರದ ಈ ಕ್ರಮ ಸರಿಯಲ್ಲ, ಇದು ಬೇಜವಾಬ್ದಾರಿ ಸರ್ಕಾರ. ಯಾವ ಆಧಾರದ ಮೇಲೆ ಕ್ರಮ ಕೈಗೊಂಡಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.