CM Siddaramaiah: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ ಎಂದ ಸಿಎಂ

CM Siddaramaiah: ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

image-e98ba8db-f7e6-4c4d-8ee2-1e07dcd310b8.jpg
Profile Prabhakara R January 13, 2025
ಬೆಂಗಳೂರು: ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತಿ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ ಎಂದು ಪ್ರಶ್ನಿಸಿದ್ದಾರೆ. 2018-19ರಲ್ಲಿ 24.42 ಲಕ್ಷ ಕೋಟಿ ರೂ.ಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ 46.28 ಲಕ್ಷ ಕೋಟಿಯಷ್ಟಾಗಿದೆ. 2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು 46,288 ಕೋಟಿ ರೂ.ಗಳಾಗಿದ್ದರೆ, 2024-25ರಲ್ಲಿ ಇದು 44,485 ಕೋಟಿ ಮಾತ್ರ. ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ? ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕೂವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ 45,000 ಕೋಟಿ ಮತ್ತು ಅನುದಾನವಾಗಿ 15,000 ರೂ. ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ ಎಂದು ತಿಳಿಸಿದ್ದಾರೆ. ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (17,403 ಕೋಟಿ ರೂ.), ಮಧ್ಯಪ್ರದೇಶ (13,582 ಕೋಟಿ ರೂ.), ರಾಜಸ್ಥಾನ (10,426 ಕೋಟಿ ರೂ.) ಮತ್ತು ಉತ್ತರಪ್ರದೇಶಕ್ಕೆ (31,099 ಕೋಟಿ ರೂ.) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ 6,310 ಕೋಟಿ ನೀಡಿದೆ. ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ಧಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು ಎಂದು ಪ್ರಶ್ನಿಸಿದ್ದಾರೆ. ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯಕ್ಕೆ ಪರಿಹಾರವಾಗಿ 5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ. ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ ಎಂದು ಟೀಕಿಸಿದ್ದಾರೆ. ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ. ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ ಎಂದ ಹೇಳಿದ್ದಾರೆ. ಈ ಸುದ್ದಿಯನ್ನೂ ಓದಿ | Nandini Milk: ಮಹಾ ಕುಂಭ ಮೇಳದಲ್ಲೂ ಸಿಗಲಿದೆ ನಂದಿನಿ ಹಾಲಿನ ಉತ್ಪನ್ನ; ಮೆ॥ಚಾಯ್ ಪಾಯಿಂಟ್ ಜತೆ ಪಾಲುದಾರಿಕೆ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ