ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM's City Rounds: ಮೆಟ್ರೋ ಕಾಮಗಾರಿ ವೇಳೆ ವೈಟ್ ಟಾಪಿಂಗ್ ರಸ್ತೆಗಳು ಹಾಳು; ದುರಸ್ತಿಗೆ ಸಿಎಂ ಸೂಚನೆ

CM Siddaramaiah: ಮೆಟ್ರೋ ಕಾಮಗಾರಿ ಆಗುವಾಗ ಮೆಟ್ರೋದವರು ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.

ಮೆಟ್ರೋ ಕಾಮಗಾರಿ ವೇಳೆ ವೈಟ್ ಟಾಪಿಂಗ್ ರಸ್ತೆ ಹಾಳು; ದುರಸ್ತಿಗೆ ಸಿಎಂ ಸೂಚನೆ

-

Prabhakara R Prabhakara R Sep 27, 2025 4:49 PM

ಬೆಂಗಳೂರು: ರಾಜಧಾನಿಯ ರಸ್ತೆಗಳ ದುಸ್ಥಿತಿ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದರಿಂದ ಒಂದು ತಿಂಗಳೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಸೂಚಿಸಿದ್ದರು. ಇದೀಗ ನಗರದ ವಿವಿಧೆಡೆ ಸಿಎಂ ಭೇಟಿ ನೀಡಿ, ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ್ದಾರೆ.

ರಸ್ತೆಯಲ್ಲಿ ಘನ ತ್ಯಾಜ್ಯ ಚೆಲ್ಲಿದ್ದಕ್ಕೆ ಗರಂ ಆದ ಸಿಎಂ

ಮಾರ್ಗ ಮಧ್ಯೆ ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮೆರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್‌ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.

ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

_CM's City Rounds (2)

ಇನ್ನು ಬೆಂಗಳೂರು ನಗರ ಪ್ರದಕ್ಷಿಣೆಯ ಅಂಗವಾಗಿ ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಸಮೀಪ ರಸ್ತೆಯ ಮೇಲೆ ಮಳೆ ನೀರು ಸಂಗ್ರಹವಾಗುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ನೀರು ನಿಲ್ಲಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆದು, ಮಳೆನೀರಿನ ಸರಾಗ ಹರಿವಿಗೆ ಸೂಕ್ತ ಒಳಚರಂಡಿ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

_CM's City Rounds (1)

ಈ ಸುದ್ದಿಯನ್ನೂ ಓದಿ | Cabinet Meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಪ್ರಮುಖ ನಿರ್ಣಯಗಳೇನು?

ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ

ಮೆಟ್ರೋ ಕಾಮಗಾರಿ ಆಗುವಾಗ ಮೆಟ್ರೋದವರು ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.