CM Siddaramaiah: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ರೂ, ಯಾಕಿಂಗಾಯ್ತು? ಸಿಎಂ ಸಿದ್ದರಾಮಯ್ಯ ಪ್ರಶ್ನೆ

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

image-789bcc65-f5c4-462a-94a4-a2658f461176.jpg
Profile Vishwavani News January 10, 2025
ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ (MUDA) ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. image-bb84a4c8-2e97-411c-80e4-1790696c9adb.jpg ಪ್ರತ್ಯೇಕ ಸಭೆ ಕರೆಯಲು ಸೂಚನೆ ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ 15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು. ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕ್ರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು. ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ ನೀಡಿದರು. ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚಿಸಿದರು. ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ ನೀಡಿದರು. ಈ ಸುದ್ದಿಯನ್ನೂ ಓದಿ | Sankranti Festival 2025: ಸಂಕ್ರಾಂತಿಗೆ ಎಳ್ಳು-ಬೆಲ್ಲ ಹಂಚಲು ಬಂತು ಬಗೆಬಗೆಯ ಡಿಸೈನರ್ ಬಾಕ್ಸ್! ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ