ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.
ಸಮೀಕ್ಷೆಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುವುದು.
ಸಮೀಕ್ಷೆಯ ಪೋಸ್ಟರ್ ಬಿಡುಗಡೆ ವೇಳೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು, ಹಿರಿಯ ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | Karnataka Grameena Bank Recruitment 2025: ಪದವೀಧರರಿಗೆ ಗುಡ್‌ನ್ಯೂಸ್; ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ