Ramon Magsaysay Award 2025: ಮ್ಯಾಗ್ಸೆಸೆ ಪ್ರಶಸ್ತಿ; 'Educate Girls' ಸಂಸ್ಥೆ ಸ್ಥಾಪಕಿ ಸಫೀನಾ ಹುಸೇನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
Safeena Husain: ಭಾರತದ 'Educate Girls' ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

-

ಬೆಂಗಳೂರು: 2025ನೇ ಸಾಲಿನ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾರತದ 'Educate Girls' ಸಂಸ್ಥೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ 'Educate Girls' ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ (Safeena Husain) ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ ಶಿಕ್ಷಣಕ್ಕಾಗಿ ಆರಂಭಗೊಂಡಿದ್ದ "Educate Girls" ಸಂಸ್ಥೆಯು, ಕಾಲ ಕಳೆದಂತೆ ಹೆಮ್ಮರವಾಗಿ ಬೆಳೆದು ಇಂದು ಸಾವಿರಾರು ಶಿಕ್ಷಣ ವಂಚಿತ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿಸಲು ನಿಸ್ವಾರ್ಥ ಶ್ರಮಿಸುತ್ತಿದೆ.
ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ 'Educate Girls' ಸಂಸ್ಥೆಯ ಹಿಂದಿರುವ ನಿಸ್ವಾರ್ಥ ಜೀವಗಳಿಗೆ ಈ ಪ್ರಶಸ್ತಿ ಹೊಸ ಸ್ಪೂರ್ತಿ ತುಂಬಲಿದೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.
ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ 'Educate Girls' ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ ಅಭಿನಂದನೆಗಳು.
— Siddaramaiah (@siddaramaiah) August 31, 2025
ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ… pic.twitter.com/XffRNcbKBq
ಎಜುಕೇಟ್ ಗರ್ಲ್ಸ್ ಸಂಸ್ಥೆಯ ಹಿನ್ನೆಲೆ
ಮೊದಲು ರಾಜಸ್ಥಾನದಲ್ಲಿ ಆರಂಭವಾದ ಎಜುಕೇಟ್ ಗರ್ಲ್ಸ್ ಬಾಲಕಿಯರ ಶಿಕ್ಷಣಕ್ಕೆ ಹಗಲಿರುಳು ಶ್ರಮಿಸುತ್ತಿದೆ. ಹಲವು ಹೆಣ್ಣು ಮಕ್ಕಳನ್ನು ಶಾಲೆಗೆ ಮರಳಿ ಕರೆತರುವಲ್ಲಿ ಯಶಸ್ವಿಯೂ ಆಗಿದೆ. ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಹೊಂದಲು ಮತ್ತು ಉದ್ಯೋಗ ಪಡೆಯಲು ಅವರಿಗೆ ನೆರವಾಗುವವರೆಗೆ ಈ ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ.
ಪ್ರಶಸ್ತಿ ಬಂದಿರುವುದಕ್ಕೆ ಸಂಸ್ಥಾಪಕಿ ಸಫೀನಾ ಹುಸೇನ್ ಸಂತಸ ವ್ಯಕ್ತಪಡಿಸಿ, ʼʼಎಜುಕೇಟ್ ಗರ್ಲ್ಸ್ ಮತ್ತು ದೇಶಕ್ಕೆ ಇದು ಐತಿಹಾಸಿಕ ಕ್ಷಣ. ಈ ಗೌರವವು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ನಡೆದ ಜನಪ್ರೇರಿತ ಚಳುವಳಿಯನ್ನು ಜಗತ್ತಿಗೆ ತೋರಿಸುತ್ತದೆʼʼ ಎಂದು ಹೇಳಿದ್ದಾರೆ.