ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ಕೇಸ್‌; ವರದಿ ನೀಡುವಂತೆ ಸಿಎಂ ಸೂಚನೆ

DGP Ramachandra Rao Case: ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಈ ಬಗ್ಗೆ ವರದಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಜಿಪಿ ರಾಮಚಂದ್ರರಾವ್‌

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ಪ್ರಕರಣಕ್ಕೆ (DGP Ramachandra Rao Case) ಸಂಬಂಧಿಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಮಚಂದ್ರರಾವ್ ತನ್ನ ಕಚೇರಿಯಲ್ಲೇ ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇನ್ನು ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಅವರು, ನನಗೆ ಈ ವಿಚಾರ ಬೆಳಗ್ಗೆ ಗೊತ್ತಾಯಿತು. ನಾವು ಈ ಪ್ರಕರಣದ ಬಗ್ಗೆ ತನಿಖೆ ಮಾಡಿಸಿ, ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಉನ್ನತ ಅಧಿಕಾರಿಯಾದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.



ಅದು ಎಐ ವಿಡಿಯೊ ಎಂದ ಡಿಜಿಪಿ!

ವಿಡಿಯೊ ವೈರಲ್ ಆದ ಬೆನ್ನಲ್ಲೇ ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ. ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಎಐ ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೊ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ತರಲು ಷಡ್ಯಂತ್ರ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಏನಿದು ಪ್ರಕರಣ?

ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ.

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿತ್ತು. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿತ್ತು. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಹೊರಬಂದಿದ್ದವು.

ಬಸ್‌ನಲ್ಲಿ ರೀಲ್ಸ್‌ ಮಾಡ್ತಾ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಮಹಿಳೆ; ವಿಡಿಯೊ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ

ಈ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದವು. ಹೀಗಾಗಿ ಪ್ರಕರಣದ ಬಗ್ಗೆ ವರದಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.