ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hebbal Flyover: ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ; ಫೇವರಿಟ್‌ ಬೈಕ್‌ ಏರಿ ಡಿಕೆಶಿ ಜಾಲಿ ರೈಡ್‌

Hebbal Flyover Inauguration: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಹೆಬ್ಬಾಳ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮೊದಲು ಟೇಪ್ ಕತ್ತರಿಸಿ, ನಂತರ ಡಿಸಿಎಂ ಬೈಕ್ ರೈಡ್‌ಗೆ ಹಸಿರು ಬಾವುಟ ತೋರಿ ಚಾಲನೆ ನೀಡಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು. ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಹೆಬ್ಬಾಳ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮೊದಲು ಟೇಪ್ ಕತ್ತರಿಸಿ, ನಂತರ ಡಿಸಿಎಂ ಬೈಕ್ ರೈಡ್‌ಗೆ ಹಸಿರು ಬಾವುಟ ತೋರಿ ಉದ್ಘಾಟಿಸಿದರು.

DCM DK Shivakumar

ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಮಾಜಿ ಸಂಸದೆ, ನಟಿ ರಮ್ಯಾ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿ.ಡಿ.ಎ. ಕಮಿಷನರ್ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

DK Shivakumar

ಬೈಕ್ ಪ್ರೇಮಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಅಂದರೆ ಪದವಿ ವ್ಯಾಸಂಗ ಮಾಡುವಾಗ 10,400 ರೂ. ಗೆ ಸಿಎಇ 7684 ಸಂಖ್ಯೆಯ ಯಡ್ಜಿ ಬೈಕ್ ಖರೀದಿಸಿದ್ದರು. ಕಾಲೇಜು ದಿನಗಳಲ್ಲಿ ಬಳಸಿದ್ದ ಈ ಬೈಕ್ ಅನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ಹಳೆಯ ಬೈಕ್‌ ನವೀಕರಣ ಮಾಡುವ ಯುವಕ ಸುಪ್ರೀತ್ ಅವರು ರೀ ಕಂಡೀಷನಿಂಗ್ ಮಾಡಿದ್ದರು. ಈಗ ತಮ್ಮ ನೆಚ್ಚಿನ ಬೈಕ್ ಅನ್ನು ಹೆಬ್ಬಾಳ ಮೇಲ್ಸೇತುವೆ ಮೇಲೆ ಸೋಮವಾರ ಓಡಿಸಿದರು. ಅವರ ಅಭಿಮಾನಿಗಳು ಜೋರು ಚಪ್ಪಾಳೆ ತಟ್ಟಿ, ಸಿಳ್ಳೆ ಹೊಡೆದು ಸಂಭ್ರಮಿಸಿದರು.

_Hebbal Flyover Inauguration (2)

ಈ ಸುದ್ದಿಯನ್ನೂ ಓದಿ | BRBNMPL Recruitment 2025: ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈವೇಟ್‌ ಲಿಮಿಟೆಡ್‌ನಲ್ಲಿದೆ 88 ಹುದ್ದೆ; ಐಟಿಐ ಪಾಸಾದವರು ಅಪ್ಲೈ ಮಾಡಿ

ಹೆಬ್ಬಾಳ ಮೇಲ್ಸೇತುವೆ 700 ಮೀ. ಉದ್ದದ ಲೂಪ್ ರಸ್ತೆಯಾಗಿದ್ದು, 2023ರಲ್ಲಿ ಇದರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ರೂ.80 ಕೋಟಿ ವೆಚ್ಚದಲ್ಲಿ ಈ ಮೇಲ್ಸೆತುವೆ ನಿರ್ಮಾಣ ಮಾಡಲಾಗಿದ್ದು, ಇದರಿಂದ ಶೇ. 30 ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಯೋಗಿಕ ಸಂಚಾರ ಮಾಡುವ ಮೂಲಕ ಪರೀಕ್ಷೆ ಮಾಡಿದ್ದರು.

_Hebbal Flyover Inauguration